ಅಳ್ನಾವರ: ‘ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರು ತಮ್ಮ ಆಸ್ತಿಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ನೊಂದಣಿ ಮಾಡಿಕೊಳ್ಳಬೇಕು. ಇದರಿಂದ ನೇರವಾಗಿ ಸರ್ಕಾರದ ಸೌಲಭ್ಯ ಪಡೆಯಲು ಸುಲಭವಾಗುತ್ತದೆ‘ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮಧು ಬಡಸ್ಕರ್ ಹೇಳಿದರು.
ಇಲ್ಲಿನ ಪಟ್ಟಣ ಪಂಚಾಯಿತಿ ವತಿಯಿಂದ ಶುಕ್ರವಾರ ಹಮ್ಮಿಕೊಂಡ ಇ-ಆಸ್ತಿ ನೊಂದಣಿ ಜಾಗೃತಿ ಸಪ್ತಾಹ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಅಗತ್ಯ ದಾಖಲೆಗಳನ್ನು ನೀಡಿ ಈ ವಿನೂತನ ತಂತ್ರಾಂಶದಲ್ಲಿ ತಮ್ಮ ಆಸ್ತಿ ನೋಂದಣಿ ಮಾಡಿಕೊಳ್ಳಬೇಕು’ ಎಂದರು.
‘ಆಸ್ತಿ ತೆರಿಗೆ, ನೀರಿನ ಕರವನ್ನು ಸಕಾಲಕ್ಕೆ ಪಾವತಿಸಿ ಪಟ್ಟಣದ ಅಭಿವೃದ್ಧಿಗೆ ಸಹಕರಿಸಬೇಕು. ಆಸ್ತಿ ತೆರಿಗೆ ಏಪ್ರಿಲ್ ತಿಂಗಳೊಳಗೆ ಪಾವತಿಸುವ ಮೂಲಕ ಶೇ 5ರಷ್ಟು ರಿಯಾಯಿತಿ ಪಡೆಯಿರಿ. ನೀರನ್ನು ಮಿತವಾಗಿ ಬಳಸಿ. ಮನೆ ಮತ್ತು ಅಂಗಡಿಗಳ ತ್ಯಾಜ್ಯವನ್ನು ಪಟ್ಟಣ ಪಂಚಾಯಿತಿಯ ತ್ಯಾಜ್ಯ ಸಂಗ್ರಹ ಗಾಡಿಗೆ ನೀಡಬೇಕು ಎಂಬ ವಿಷಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಅಮೂಲ ಗುಂಜೀಕರ, ಸ್ಥಾಯಿ ಸಮಿತಿ ಅಧ್ಯಕ್ಷ ಜೈಲಾನಿ ಸುದರ್ಜಿ, ರಮೇಶ ಕುನ್ನೂರಕರ, ತಾಲ್ಲೂಕ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಾಯಕ ಕುರುಬರ, ಮುಖ್ಯಾಧಿಕಾರಿ ಪ್ರಕಾಶ ಮುಗದಮು, ನಾಗರಾಜ ಗುರ್ಲಹುಸೂರು, ಎಂ.ಎಸ್. ಬೆಂತೂರ, ದೀಪಕ ಕಿತ್ತೂರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.