ಹುಬ್ಬಳ್ಳಿ: ‘ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡರೆ ಇಡೀ ಕುಟುಂಬ ಬದಲಾವಣೆ ಆಗಲಿದೆ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದ ವಾರ್ಡ್ ನಂ 39ರಲ್ಲಿನ ಚಾಮುಂಡೇಶ್ವರಿ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್‌ಎಫ್‌ಸಿ ಮುಕ್ತನಿಧಿ ಹಾಗೂ ಹು–ಧಾ ಮಹಾನಗರ ಪಾಲಿಕೆ ಅನುದಾನದಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ‘ಮಹಿಳೆಯರು ನಿಮ್ಮ ಆರ್ಥಿಕ ಪ್ರಗತಿಯ ಜೊತೆಗೆ ಇತರರಿಗೆ ಉದ್ಯೋಗ ನೀಡುವ ಮೂಲಕ ಅವರ ಆರ್ಥಿಕ ಸಬಲೀಕರಣಕ್ಕೂ ಸಹಕರಿಸಬೇಕು’ ಎಂದರು.
ಬಿಜೆಪಿ ಮುಖಂಡ ಸಿದ್ದು ಮೊಗಲಿಶೆಟ್ಟರ್ ಅವರು, ‘ವಾರ್ಡ್ ನಂ 39ರಲ್ಲಿನ 32 ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದ್ದು, ಮಹಿಳೆಯರು ಶ್ರಮವಹಿಸಿ ಕೆಲಸ ಮಾಡಬೇಕು’ ಎಂದರು.
ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಣ್ಣ ಕೊರವಿ ಮಾತನಾಡಿದರು. ಉಪ ಮೇಯರ್ ದುರ್ಗಮ್ಮ ಬಿಜವಾಡ, ಪಾಲಿಕೆ ಸದಸ್ಯರಾದ ಸಿದ್ದು ಮೊಗಲಿಶೆಟ್ಟರ, ಪ್ರಮುಖರಾದ ರವಿ ನಾಯಕ, ರಘು ಧಾರವಾಡಕರ, ಪರಶುರಾಮ ಮಲ್ಯಾಳ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.