ಅಳ್ನಾವರ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಹಲವಾರು ಉಪಯುಕ್ತ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಅಭಿವೃದ್ಧಿಗೆ ವೇಗ ದೊರೆತಿದೆ. ಜನರ ಬದುಕು ಹಸನಾಗಿದೆ’ ಎಂದು ವಿಧಾನ ಪರಿಷತ್‍ನಲ್ಲಿನ ಸರ್ಕಾರದ ಮುಖ್ಯ ಸಚೇತಕ ಸಲೀಂಅಹ್ಮದ್ ಹೇಳಿದರು.
ಇಲ್ಲಿನ ಪಟ್ಟಣ ಪಂಚಾಯಿತಿ ವತಿಯಿಂದ ಗುರುವಾರ ಪೌರ ಸನ್ಮಾನ ಸ್ವೀಕರಿಸಿದ ಅವರು, ‘ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಬಲಾಢ್ಯವಾಗಿ ಹೊರಹೊಮ್ಮಿದೆ’ ಎಂದರು.
ಮನವಿ: ‘ಪಟ್ಟಣಕ್ಕೆ ಯುಜಿಡಿ ಯೋಜನೆ ಮಂಜೂರಿ ಮಾಡಬೇಕು, ಚರಂಡಿ, ರಸ್ತೆ ನಿರ್ಮಿಸಲು ₹2 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು, ಸ್ಮಶಾನಗಳ ಅಭಿವೃದ್ಧಿಗೆ ಪ್ರದೇಶಾಭಿವೃದ್ಧಿ ಅನುದಾನ ಮಂಜೂರಿ ಮಾಡಬೇಕು. ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆಗೆ ಸರ್ಕಾರದ ಮಟ್ಟದಲ್ಲಿ ಶೀಘ್ರ ಮಂಜೂರಾತಿ ಕೊಡಿಸಬೇಕು. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಬೇಕು’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಮೋಲ ಗುಂಜೀಕರ ಸಲೀಂಅಹ್ಮದ್ ಅವರಿಗೆ ನೀಡಿದರು.
ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷ ಜೈಲಾನಿ ಸುದರ್ಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರಶಗೌಡ ಕರಿಗೌಡರ, ಶ್ರೀಕಾಂತ ಗಾಯಕವಾಡ, ಮುಖ್ಯಾಧಿಕಾರಿ ಪ್ರಕಾಶ ಮುಗದಮ, ಸದಸ್ಯ ನದೀಮ ಕಾಂಟ್ರ್ಯಾಕ್ಟರ್, ಎಂ.ಎಸ್. ಬೆಂತೂರ, ನಾಗರಾಜ ಗುರ್ಲಹೊಸೂರ ಇದ್ದರು.
ಸನ್ಮಾನ: ಇಲ್ಲಿನ ಮಿಲ್ಲತ್ ಶಾಲೆ ಕಟ್ಟಡ ನಿರ್ಮಾಣಕ್ಕೆ ₹5 ಲಕ್ಷ ಮಂಜೂರಿ ಮಾಸಿಡಿದ ಸಲೀಂಅಹ್ಮದ್ ಅವರನ್ನು ಮಿಲ್ಲತ್ ಶಾಲೆಯಲ್ಲಿ ರೆಹನುಮಾ ಎ ಮಿಲ್ಲತ್ ಸೊಸೈಟಿ ಅಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್ ಸತ್ಕರಿಸಿದರು. ಫಹೀಮ್ ಕಾಂಟ್ರ್ಯಾಕ್ಟರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.