ADVERTISEMENT

ಚುನಾವಣೆ: ತಳಮಟ್ಟದಲ್ಲಿ ಪಕ್ಷ ಬಲಪಡಿಸಿ- ಜೋಶಿ, ಶೆಟ್ಟರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 3:04 IST
Last Updated 13 ಆಗಸ್ಟ್ 2022, 3:04 IST
ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಶಾಸಕ ಜಗದೀಶ ಶೆಟ್ಟರ್, ಮಹಾನಗರ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಶಾಸಕ ಅರವಿಂದ ಬೆಲ್ಲದ ಹಾಗೂ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಭಾಗವಹಿಸಿದ್ದರು

ಹುಬ್ಬಳ್ಳಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು. ಕಾರ್ಯಕರ್ತರು ಮತದಾರರ ಮನೆಯ ಸಂಪರ್ಕ ಸಾಧಿಸಬೇಕು. ಪಕ್ಷದ ಸಾಧನೆಗಳನ್ನು ತಿಳಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಶಾಸಕ ಜಗದೀಶ ಶೆಟ್ಟರ್ ಸೂಚನೆ ನೀಡಿದರು.

ನಗರದಲ್ಲಿ ಶುಕ್ರವಾರ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿd ಇಬ್ಬರೂ, ಚುನಾವಣೆ ಸಂದರ್ಭದಲ್ಲಿ ಯಾವುದೇ ಗೊಂದಲವಾಗದಂತೆ ಈಗಿನಿಂದಲೇ ಮತದಾರರ ನೋಂದಣಿಗೆ ಆದ್ಯತೆ ನೀಡಬೇಕು.ಮತದಾರರ ಚೀಟಿಗೆ ಆಧಾರ್ ಲಿಂಕ್ ಮಾಡಿಸುವುದರ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಸಾಧ್ಯವಾದರೆ ವಿಧಾನಸಭಾ ಕ್ಷೇತ್ರ ಮತ್ತು ವಾರ್ಡ್‌ವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಅರಿವು ಮೂಡಿಸಬೇಕು. ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಅಭಿಯಾನ ನಡೆಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಮಹಾನಗರ ಘಟಕದ ಅಧ್ಯಕ್ಷ ಸಂಜಯ ಕಪಟಕರ, ಮುಖಂಡರಾದ ವೀರಭದ್ರಪ್ಪ ಹಾಲಹರವಿ, ನಾಗೇಶ ಕಲಬುರ್ಗಿ ಹಾಗೂ ರಾಜಕುಮಾರ ಬಸವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.