ADVERTISEMENT

‘ಅನುಕಂಪ ಬೇಡ; ಸಹಾಯ ಹಸ್ತ ನೀಡಿ‘

ವಿಶ್ವ ಅಂಗವಿಕರ ದಿನಾಚರಣೆ: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಶಿರೂರ ಸಲಹೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2018, 11:42 IST
Last Updated 3 ಡಿಸೆಂಬರ್ 2018, 11:42 IST
ಹುಬ್ಬಳ್ಳಿಯಲ್ಲಿ ನಡೆದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಅಂಗವಿಕಲ ಕ್ರಿಕೆಟ್ ಆಟಗಾರ ಮಹೇಶ ಕುಮಾರ್ ಅಗಳಿ ಅವರನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಶಿರೂರ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್‌ ಸನ್ಮಾನಿಸಿದರು–ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯಲ್ಲಿ ನಡೆದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಅಂಗವಿಕಲ ಕ್ರಿಕೆಟ್ ಆಟಗಾರ ಮಹೇಶ ಕುಮಾರ್ ಅಗಳಿ ಅವರನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಶಿರೂರ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್‌ ಸನ್ಮಾನಿಸಿದರು–ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ‘ಅಂಗವಿಕಲರಿಗೆ ಅನುಕಂಪ ತೋರುವ ಬದಲು ಸಹಾಯ ಹಸ್ತ ನೀಡಿ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಶಿರೂರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಡಿದರು.

‘ದೇಹದ ಎಲ್ಲ ಅಂಗಗಳು ಸರಿ ಇದ್ದರೂ ಏನೂ ಸಾಧನೆ ಮಾಡದವರನ್ನು ಕಾಣಬಹುದು. ಆದರೆ ಅಂಗವಿಕಲತೆ ಇದ್ದರೂ ದೊಡ್ಡ ಸಾಧನೆ ಮಾಡಿರುವ ವ್ಯಕ್ತಿಗಳು ಇಮ್ಮ ಮಧ್ಯದಲ್ಲಿದ್ದಾರೆ. ಆದ್ದರಿಂದ ಅಂಗವಿಕಲರು ಎನ್ನುವ ಬದಲು ದೇವರ ಮಕ್ಕಳು ಎನ್ನುವುದು ಸೂಕ್ತ. ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಶೇ5ರಷ್ಟನ್ನು ಅಂಗವಿಕಲರಿಗಾಗಿ ಮೀಸಲಿಡಲಾಗಿದೆ. ಇನ್ನೂ ಹೆಚ್ಚಿನ ಅನುದಾನ ಹಾಗೂ ಪ್ರೋತ್ಸಾಹ ಸಿಕ್ಕರೆ ಅವರು ಉನ್ನತ ಸ್ಥಾನಕ್ಕೇರುವರು’ ಎಂದು ಹೇಳಿದರು.

ADVERTISEMENT

‘ಅಂಗವಿಕಲರ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅಧಿಕಾರಿಗಳು ಅವುಗಳನ್ನು ಪ್ರಚಾರ ಮಾಡಬೇಕು. ಅಂಗವಿಕಲರು ಎಲ್ಲ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ನಿಮ್ಮ ಯಾವುದೇ ಸಮಸ್ಯೆ ಅಥವಾ ಬೇಡಿಕೆ ಇದ್ದರೆ ಅದನ್ನು ಸರ್ಕಾರದ ಗಮನಕ್ಕೆ ತರುತ್ತೇನೆ’ ಎಂದು ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹೇಳಿದರು.

ಅಂತರರಾಷ್ಟ್ರೀಯ ಅಂಗವಿಕಲ ಕ್ರಿಕೆಟ್ ಆಟಗಾರ ಮಹೇಶ ಕುಮಾರ್ ಅಗಳಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕೆ.ಎಂ. ಅಮರನಾಥ ಇಲಾಖೆಯ ಪ್ರಸಕ್ತ ಸಾಲಿನ ಪ್ರಗತಿ ವರದಿ ವಾಚಿಸಿದರು. ಪಾಲಿಕೆಯ ವಿಶೇಷ ಅಧಿಕಾರಿ ಎಸ್‌.ವಿ. ಬೇವೂರ ಇದ್ದರು. ರಂಜನಾ ಮತ್ತು ಪ್ರಭು ಬಿಸರಳ್ಳಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.