ಹುಬ್ಬಳ್ಳಿ: ನಗರದಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
ಇಲ್ಲಿನ ಕೇಶ್ವಾಪುರದಲ್ಲಿ ಶುಕ್ರವಾರ ನಡೆದ ಕಾರ್ಯಕಾರಿಣಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದ ಅವರು, 10 ವರ್ಷಗಳ ಹಿಂದೆ ನಗರದಲ್ಲಿ ಕಾರ್ಯಕಾರಿಣಿ ನಡೆದಿತ್ತು. ಈಗ ಮತ್ತೊಂದು ಬಾರಿ ಹುಬ್ಬಳ್ಳಿಯಲ್ಲಿ ಆಯೋಜನೆಯಾಗಿದ್ದು, ನಾವೆಲ್ಲರೂ ಅದರ ಯಶಸ್ಸಿಗೆ ಶ್ರಮಿಸಬೇಕು ಎಂದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕಾರ್ಯಕಾರಿಣಿಗೆ ದುಂದು ವೆಚ್ಚ ಮಾಡುವುದಕ್ಕೆ ಕಡಿವಾಣ ಹಾಕಬೇಕು. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಇತರ ಮುಖಂಡರು ಜ.10ರಂದು ಹುಬ್ಬಳ್ಳಿ–ಧಾರವಾಡ ಬೈಪಾಸ್ ವಿಸ್ತರಣೆ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಸಚಿವ ಶಂಕರಪಾಟೀಲ ಮುನೇನಕೊಪ್ಪ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಲಿಂಗರಾಜ ಪಾಟೀಲ, ನಾಗೇಶ ಕಲಬುರ್ಗಿ, ಅಶೋಕ ಕಾಟವೆ, ಸೀಮಾ ಮಸೂತಿ, ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ, ತಿಪ್ಪಣ್ಣ ಮಜ್ಜಗಿ ಇದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.