
ಹುಬ್ಬಳ್ಳಿ: ರಫ್ತು ವ್ಯಾಪಾರದ ಬಗ್ಗೆ ಆಸಕ್ತಿ ಹೊಂದಿರುವ ಎಂ.ಎಸ್.ಎಂ.ಇ. ಉದ್ದಿಮೆದಾರರಿಗೆ ಕೇಂದ್ರ ಸರ್ಕಾರದ ರ‍್ಯಾಂಪ್ ಯೋಜನೆಯಡಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ ಧಾರವಾಡ ಹಾಗೂ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹುಬ್ಬಳ್ಳಿ ಸಹಯೋಗದಲ್ಲಿ ಫೆ.23ರಿಂದ 28ರವರೆಗೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಫ್ತು ವ್ಯವಹಾರ ಪ್ರಾರಂಭಿಸಲು ಇಚ್ಛಿಸುವವರು, ರಫ್ತು ವ್ಯವಹಾರ ಕುರಿತು ಬೋಧನೆಯಲ್ಲಿ ನಿರತವಾಗಿರುವ ಶೈಕ್ಷಣಿಕ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಬಹುದು. ನೋಂದಣಿಗೆ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಜಾಲತಾಣ https://vtpc.karnataka.gov.in ಭೇಟಿ ನೀಡಿ ಗೂಗಲ್ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿಗೆ ಫೆ.10 ಕೊನೆ ದಿನ. ತರಬೇತಿ ಶುಲ್ಕ ₹5,900 ಇದೆ.
ಹೆಚ್ಚಿನ ಮಾಹಿತಿಗಾಗಿ ಮೊ: 80737 07446, 97427 09229 ಸಂಪರ್ಕಿಸಬಹುದು ಎಂದು ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಉಪ ನಿರ್ದೇಶಕ ಟಿ.ಎಸ್. ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.