
ಪ್ರಜಾವಾಣಿ ವಾರ್ತೆ
ರೈಲು (ಸಾಂದರ್ಭಿಕ ಚಿತ್ರ )
ಹುಬ್ಬಳ್ಳಿ: ಗುಂಟೂರು ವಿಭಾಗ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಳ್ಳುವ ಸಲುವಾಗಿ ಹುಬ್ಬಳ್ಳಿ ಮತ್ತು ವಿಜಯವಾಡ ನಿಲ್ದಾಣಗಳ ನಡುವೆ ಪ್ರತಿ ದಿನ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.
ಮೇ 16ರಿಂದ 31ರ ವರೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್ ಪ್ರೆಸ್ ರೈಲು (17329), ಮೇ 17ರಿಂದ ಜೂನ್ 1ರ ವರೆಗೆ ವಿಜಯವಾಡ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ರೈಲು (17330) ರದ್ದುಗೊಳ್ಳಲಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.