ADVERTISEMENT

ಹುಬ್ಬಳ್ಳಿ | ₹6.98 ಲಕ್ಷ ವಂಚನೆ; ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 6:48 IST
Last Updated 4 ಫೆಬ್ರುವರಿ 2026, 6:48 IST
<div class="paragraphs"><p>&nbsp;ವಂಚನೆ–ಪ್ರಾತಿನಿಧಿಕ ಚಿತ್ರ</p></div>

 ವಂಚನೆ–ಪ್ರಾತಿನಿಧಿಕ ಚಿತ್ರ

   

ಹುಬ್ಬಳ್ಳಿ: ಫೇಸ್‌ಬುಕ್‌ ಖಾತೆಯಲ್ಲಿನ ಜಾಹೀರಾತಿನ ಲಿಂಕ್‌ ಒತ್ತಿದ ಇಲ್ಲಿನ ವಿದ್ಯಾನಗರದ ಗೀತಾ ಅಮರಶೆಟ್ಟಿ ಅವರಿಗೆ ವಾಟ್ಸ್‌ಆ್ಯಪ್‌ನಲ್ಲಿ ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿ, ಅವರಿಂದ ₹6.98 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.

ಗೀತಾ ಅವರ ಫೇಸ್‌ಬುಕ್‌ ಖಾತೆಯಲ್ಲಿ ಝಾಮ್‌ ಝಾಮ್‌ ಗಿಫ್ಟ್‌ ಜಾಹೀರಾತು ಪ್ರದರ್ಶನವಾಗಿದ್ದು, ಅದರ ಲಿಂಕ್‌ ಒತ್ತಿದ್ದರು. ತಕ್ಷಣ ಅವರ ವಾಟ್ಸ್‌ಆ್ಯಪ್‌ಗೆ ಸಂದೇಶ ಕಳಿಸಿದ ಆರೋಪಿ, ‘ನೀವು ಮೊಬೈಲ್‌, ಲ್ಯಾಪ್‌ಟಾಪ್‌, ವಾಚ್‌ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಗಿಫ್ಟ್‌ ರೂಪದಲ್ಲಿ ಪಡೆದಿದ್ದೀರಿ. ಅದನ್ನು ಪಡೆಯಲು ವಿವಿಧ ಶುಲ್ಕ ಪಾವತಿಸಬೇಕು’ ಎಂದು  ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಬ್ಬಳ್ಳಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.