ADVERTISEMENT

ಸುಳ್ಳು ಜಾತಿ ಪ್ರಮಾಣಪತ್ರ: ಪಾಲಿಕೆ ಸದಸ್ಯ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 25 ಮೇ 2022, 8:32 IST
Last Updated 25 ಮೇ 2022, 8:32 IST

ಹುಬ್ಬಳ್ಳಿ: ನಗರದ ವಾರ್ಡ್ ಸಂಖ್ಯೆ 51ರಿಂದ ಮಹಾನಗರ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ಸಂದೀಲ್‌ ಕುಮಾರ್ ಅವರು, ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬ ಆರೋಪದಡಿ, ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಕುರಿತು ಅದೇ ವಾರ್ಡ್‌ನಿಂದ ಬಿಜೆಪಿಯಿಂದ ಕಣಕ್ಕಿಳಿದು ಪರಾಭಾವಗೊಂಡಿದ್ದ ಕೃಷ್ಣ ಗಂಡಗಾಳೇಕರ ಅವರು ಮೇ 23ರಂದು ದೂರು ನೀಡಿದ್ದರು.

ವಾರ್ಡ್ 51 ಹಿಂದುಳಿದ ‘ಅ’ ವರ್ಗಕ್ಕೆ ಮೀಸಲಾಗಿತ್ತು. ಪ್ರವರ್ಗ (ಅ) ಜಾತಿಗೆ ಸೇರಿದ ನಾನು ಸ್ಪಧಿರ್ಸಿದ್ದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸಂದೀಲ್‌ ಕುಮಾರ್ ಹಿಂದುಳಿದ ‘ಅ’ ವರ್ಗಕ್ಕೆ ಸೇರದಿದ್ದರೂ, ತಾನು ಅದೇ ವರ್ಗಕ್ಕೆ ಸೇರಿದವನು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಸುಳ್ಳು ಜಾತಿ ಪ್ರಮಾಣಪತ್ರ ಪಡೆದು, ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಕೃಷ್ಣಾ ಅವರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT