ಅಶೋಕ ಹುಗ್ಗಣ್ಣವರ
ಹುಬ್ಬಳಿ: ಖ್ಯಾತ ಹಿಂದೂಸ್ತಾನಿ ಗಾಯಕ ಅಶೋಕ ಹುಗ್ಗಣ್ಣವರ (64) ಬುಧವಾರ ರಾತ್ರಿ ಹುಬ್ಬಳ್ಳಿಯಲ್ಲಿ ನಿಧನರಾದರು.
ಮೂಲತ ಕುಂದಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದ ಹುಗ್ಗಣ್ಣವರ, ಹೊನ್ನಾವರದ ಎಂಪಿಇ ಸೊಸೈಟಿಯ ಎಸ್.ಡಿ.ಎಂ ಕಾಲೇಜಿನಲ್ಲಿ ಸಂಗೀತ ಪ್ರಾಧ್ಯಾಪಕರಾಗಿ ಸುಧೀರ್ಘ ಸೇವೆ ಸಲ್ಲಿಸಿ, 2021 ರಲ್ಲಿ ನಿವೃತ್ತಿ ಹೊಂದಿದ್ದರು. ನಿವೃತ್ತಿ ಬಳಿಕ ಹುಬ್ಬಳ್ಳಿಯ ಉಣಕಲ್ ನಲ್ಲಿ ವಾಸವಾಗಿದ್ದರು.
ಅವರಿಗೆ ಪತ್ನಿ, ಶಿಕ್ಷಕಿ ವೀಣಾ ಮತ್ತು ಪುತ್ರ ವಿಜ್ಞಾನಿ, ಗಾಯಕ ವಿನಾಯಕ ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಹುಬ್ಬಳ್ಳಿಯ ವಿದ್ಯಾನಗರದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಹುಗ್ಗಣ್ಣವರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಂಗೀತ ವಿಷಯದಲ್ಲಿ ಚಿನ್ನದ ಪದಕದೊಂದಿದೆ ಎಂ.ಎ, ಸಂಗೀತ ರತ್ಮ ಡಿಪ್ಲೊಮಾ ಮತ್ತು ಸಸ್ಯಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದರು.
ಪಂ.ಲಿಂಗರಾಜ ಬುವಾ ಯರಗುಪ್ಪಿ ಅವರ ಬಳಿ 12 ವರ್ಷ ಗ್ವಾಲಿಯರ್ ಪದ್ಧತಿಯಲ್ಲಿ ಸಂಗೀತ ಅಭ್ಯಾಸ ಮಾಡಿದ್ದರು. ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರಿಗೆ, ಕರ್ನಾಟಕ ಕಲಾಶ್ರೀ, ಅನನ್ಯ ಮನ್ಸೂರ್ ಪ್ರಶಸ್ತಿ, ರಾಗಶ್ರೀ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.