ನವಲಗುಂದ: ಪಟ್ಟಣದಲ್ಲಿ ಜುಲೈ 21 ರಂದು ನಡೆಯುವ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೆ ಕ್ರಮಕೈಗೊಳ್ಳಲಾಗುವುದು ಎಂದು ಧಾರವಾಡ ಡಿವೈಎಸ್‌ಪಿ ಎಸ್.ಎಂ.ನಾಗರಾಜ ಹೇಳಿದರು.
ಗುರುವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶಾಂತಿಸುವ್ಯವಸ್ಥೆ ಹದಗೆಡದಂತೆ ಎಲ್ಲರೂ ಸಹಕರಿಸಬೇಕು. ಅಹಿತಕರ ಘಟನೆಗಳ ಬಗ್ಗೆ ಮಾಹಿತಿ ಬಂದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿಬೇಕು. ಬೆರೆಡೆಯಿಂದ ಬರುವ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಸಂಚಾರಕ್ಕೆ ಅನುಕೂಲ ಮಾಡಲಾಗುವುದು ಎಂದರು.
ರೈತ ಮುಖಂಡ ಶಂಕರ ಅಂಬಲಿ ಹಾಗೂ ಲೋಕನಾಥ ಹೆಬಸೂರ ಮಾತನಾಡಿ, ಬೆಳೆಹಾನಿ ಪರಿಹಾರದ ಬಗ್ಗೆ ಶಾಂತಿ ರೀತಿಯಿಂದ ಹೋರಾಟ ಮಾಡುತ್ತೇವೆ. ಹೊರಗಿನ ಮಂದಿ ಬಂದು ಗಲಾಟೆ ಮಾಡಲಾರದಂತೆ ಸೂಕ್ತ ಭದ್ರತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ತಹಶೀಲ್ದಾರ್ ಸುಧೀರ ಸಾಹುಕಾರ, ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್ಐ ಜನಾರ್ಧನ.ಬಿ ಹಾಗೂ ರೈತ ಹೋರಾಟಗಾರರಾದ ರವಿರಾಜ ಕಂಬಳಿ, ನಾರಾಯಣ ಆರೇರ, ಮೈಲಾರಪ್ಪ ವೈದ್ಯ, ಎ.ಆರ್.ತಿವಾರಿ, ಗುರುನಾಥ ಹೆಬಸೂರ ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.