ADVERTISEMENT

ಅಣ್ಣಿಗೇರಿ: ಕಡಲೆ ಖರೀದಿ ಕೇಂದ್ರ ಆರಂಭಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2022, 3:58 IST
Last Updated 9 ಫೆಬ್ರುವರಿ 2022, 3:58 IST
ಅಣ್ಣಿಗೇರಿಯಲ್ಲಿ ಕಡಲೆ ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು
ಅಣ್ಣಿಗೇರಿಯಲ್ಲಿ ಕಡಲೆ ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು   

ಅಣ್ಣಿಗೇರಿ: ಬೆಂಬಲ ಬೆಲೆ ಯೋಜನೆಯಡಿ ಕಡಲೆಬೀಜ ಖರೀದಿ ಕೇಂದ್ರವನ್ನು ಪಟ್ಟಣದಲ್ಲಿ ಪ್ರಾರಂಭಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಮಂಜುನಾಥ ಅಮಾಸಿ ಅವರ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.

ಕಡಲೆ ಬೀಜ ಪೂರ್ಣ ಪ್ರಮಾಣದಲ್ಲಿ ಬರುವ ಮುನ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರವನ್ನು ಆರಂಭಿಸಬೇಕು. ಸದ್ಯ ಖರೀದಿ ಕೇಂದ್ರ ಇಲ್ಲದ ಕಾರಣ ದಲ್ಲಾಳಿಗಳ ಮೂಲಕ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದು, ನಷ್ಟವಾಗುತ್ತಿದೆ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ಒತ್ತಾಯಿಸಿದರು.

ಒಂದು ವಾರದೊಳಗೆ ಖರೀದಿ ಕೇಂದ್ರ ಆರಂಭಿಸದಿದ್ದರೆ ಫೆ.14 ರಿಂದ ಸ್ಥಳೀಯ ಬಸ್ ನಿಲ್ದಾಣದ ಹತ್ತಿರ ಆಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದರು.
ರೈತ ಮುಖಂಡರಾದ ನಿಂಗಪ್ಪ ಬಡ್ಡೆಪ್ಪನವರ, ಬಸವರಾಜ ಹಾದಿಮನಿ, ಮಂಜುನಾಥ ಮಣ್ಣನ್ನವರ, ನಾರಾಯಣ ಮಾಡಳ್ಳಿ, ಲಕ್ಷ್ಮಣ ಮುದಕನಾಯ್ಕರ, ಮೆಹಬೂಬಸುಬಾನಿ ಖುದ್ದಣ್ಣವರ, ಇಮಾಮಸಾಬ ದಂಡಿನ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.