ADVERTISEMENT

ಕಲಘಟಗಿ: ಬೆಂಬಲ ಬೆಲೆಗೆ ರೈತರ ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 6:57 IST
Last Updated 14 ಜನವರಿ 2022, 6:57 IST
ಕೇಂದ್ರ ಸರ್ಕಾರ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕ ತಹಶೀಲ್ದಾರ್ ಯಲ್ಲಪ್ಪ ಗೊಣ್ಣೆನವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು
ಕೇಂದ್ರ ಸರ್ಕಾರ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕ ತಹಶೀಲ್ದಾರ್ ಯಲ್ಲಪ್ಪ ಗೊಣ್ಣೆನವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು   

ಕಲಘಟಗಿ: ಕೇಂದ್ರ ಸರ್ಕಾರ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ ತಾಲ್ಲೂಕು ಘಟಕ ತಹಶೀಲ್ದಾರ್ ಯಲ್ಲಪ್ಪ ಗೊಣ್ಣೆನವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಶಂಕ್ರಪ್ಪ ಮಾದನಭಾವಿ ಮಾತನಾಡಿ, ರೈತರಿಗೆ ತಾವು ಬೆಳೆದ ಬೆಳೆಗೆ ಉತ್ಪಾದನೆ ವೆಚ್ಚದ ಆಧಾರದ ಮೇಲೆ ಲಾಭದಾಯಕ ಬೆಲೆ ದೊರೆಯುವಂತಾಗಬೇಕು ಎಂದು ಒತ್ತಾಯಿಸಿದರು‌. ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀಡಿದರೆ ರೈತರ ಆದಾಯ ದ್ವಿಗುಣ ಆಗದು, ರೈತನ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿದರು. ರುದ್ರಗೌಡ ಪಾಟೀಲ, ಸಿದ್ದಯ್ಯ ಕಟ್ನೂರಮಠ, ಉಳವಪ್ಪ ಬಳಿಗೇರ, ಸುರೇಶ ಮಂಜರಗಿ, ಜಗದೀಶ ದ್ಯಾವಪ್ಪನವರ, ಕಲ್ಲಪ್ಪ ತಡಸ, ಶಿವಾನಂದ ಸಾವಳಗಿ, ಮಹಾದೇವಪ್ಪ ರಾಮನಾಳ, ಶಂಕರಗೌಡ ಪಾಟೀಲ, ಶಿವಾನಂದ ಕಂಪ್ಲಿ, ಮಣ್ಣಪ್ಪ ಜಾಲಿಹಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT