
ಅಣ್ಣಿಗೇರಿ: ‘ಬೆಳಿಗಳಿಗೆ ಸೂಕ್ತ ಬೆಲೆ ಕೊಡಿಸುವುದು, ಕೃಷಿ ಸಾಲಮನ್ನಾ ಮಾಡಲು ಒತ್ತಾಯಿಸುವುದು ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಾಗುವುದು’ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಹೇಳಿದರು.
ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಈಚೆಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಂಡ ನೂತನ ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ದಾಸೋಹ ಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿದರು.
ಕಡಲೆ ಕಟಾವಿಗೆ ಬಂದಿದ್ದು ಕೂಡಲೇ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆಯವರು ಮನವಿ ಮಾಡಿದರು.
ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಯಲ್ಲಪ್ಪ ದುಂದೂರ ಮಾತನಾಡಿ, ‘ಪ್ರದಾನ ಮಂತ್ರಿ ಕಿಸಾನ ಯೋಜನೆ ಲಾಭ ಹೊಸ ಖಾತೆದಾರರಿಗೂ ಅನ್ವಯಿಸಬೇಕು. ರೈತರು ಬ್ಯಾಂಕ್‌ನಲ್ಲಿ ಬೆಳೆ ಸಾಲ ಪಡೆಯುವಾಗ ಅಧಿಕಾರಿಗಳು ಸಿವಿಲ್ ನಿಯಮ ಸಡಿಲಿಕೆ ಮಾಡಬೇಕು’ ಎಂದರು.
‘ನಮ್ಮ ಹೊಲ ನಮ್ಮ ದಾರಿ’ಯ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಪೂಜಾರ, ನವಲಗುಂದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಕಾಲವಾಡ, ರಾಮನಗೌಡ್ರು ಪರ್ವತಗೌಡ್ರ ಸೇರಿದಂತೆ ಮಹಿಳಾ ರೈತ ಪ್ರತಿನಿಧಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.