
ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ‘ಚಳಿಗಾಲದ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸು
ತ್ತೇವೆ’ ಎಂದು ವಿಧಾನಸಭೆ ವಿರೋಧಪಕ್ಷ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
‘ಬೆಳೆಹಾನಿ ಪರಿಹಾರ, ಆರಂಭವಾಗದ ಮೆಕ್ಕೆಜೋಳ ಖರೀದಿ ಕೇಂದ್ರ ಸೇರಿ ಹಲವು ಸಮಸ್ಯೆಗಳಿವೆ. ರೈತರ ಬೇಡಿಕೆಗಳಿಗೆ ರಾಜ್ಯ ಸರ್ಕಾರವು ಸ್ಪಂದಿಸುತ್ತಿಲ್ಲ’ ಎಂದು ಹೇಳಿದರು.
‘ರಾಜ್ಯ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.ಹೀಗಾಗಿ ಹುಬ್ಬಳ್ಳಿ–ಧಾರವಾಡದಲ್ಲಿ ಕೆಲ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಂಡಿದ್ದರೆ, ಇನ್ನೂ ಕೆಲವು ಆಮೆಗತಿಯಲ್ಲಿ ಸಾಗಿವೆ‘ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.