
ಧಾರವಾಡ: ಮಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಹಾಗೂ ಬೆಳೆಹಾನಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ಉತ್ತರ ಪ್ರಾಂತದ ಜಿಲ್ಲಾ ಘಟದವರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.
ಸತತವಾಗಿ ಸುರಿದ ಮಳೆಯಿಂದ ಬೆಳೆ ಹಾಳಾಗಿದ್ದು, ರೈತರು ಪ್ರತಿ ಎಕರೆಗೆ ₹25 ರಿಂದ ₹30 ಸಾವಿರ ಖರ್ಚು ಮಾಡಿದ್ದಾರೆ. ಮರುಕಟ್ಟೆಯಲ್ಲಿ ಮೆಕ್ಕೆಜೋಳ ಬೆಲೆ ಪ್ರತಿ ಕ್ವಿಂಟಲ್‍ಗೆ ₹ 1,600 ರಿಂದ ₹1,800 ಖರೀದಿಸುತ್ತಿದ್ದು, ಇದರಿಂದ ರೈತರಿಗೆ ನಷ್ಟವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ರೈತರ ಅನೂಕೂಲಕ್ಕಾಗಿ ಸರ್ಕಾರ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಮೆಕ್ಕೆಜೋಳದ ಖರೀದಿ ಕೇಂದ್ರ ಪ್ರಾರಂಭಿಸಿ ಕನಿಷ್ಠ ₹2,500 ದರದಲ್ಲಿ ಖರೀದಿಸಬೇಕು.ಕೂಡಲೇ ಬೆಳೆಹಾನಿ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರಾಂತ ಅಧ್ಯಕ್ಷ ವಿವೇಕ ಮೋರೆ,ಗುರುನಾಥಗೌಡ ಅರಳಿವಂಡ, ಎಸ್.ಎಸ್.ಪಾಟೀಲ, ಪುಟ್ಟಸ್ವಾಮಿ, ಸಿದ್ದಪ್ಪ ಬೆಟಗೇರಿ, ನಾಗಣ್ಣ ಬೆಳಿಗಟ್ಟಿ, ಗುರು ಬೀರಣ್ಣವರ, ಶಿವಾನಂದ ಕಂಪಲಿ, ಗಂಗಾಧರ ಧರೆಣ್ಣವರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.