ADVERTISEMENT

ಮೂವರು ಮಕ್ಕಳ ಕೊಂದು ತಂದೆ ಆತ್ಮಹತ್ಯೆ: ಪತ್ನಿ ಸ್ಥಿತಿ ಗಂಭೀರ

ಬೆಳಗಿನ ಜಾವ ಸುತ್ತಿಗೆಯಿಂದ ಹಲ್ಲೆ ನಡೆಸಿದ ಮದ್ಯವ್ಯಸನಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2023, 19:01 IST
Last Updated 1 ಫೆಬ್ರುವರಿ 2023, 19:01 IST

ಹುಬ್ಬಳ್ಳಿ: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ, ತಾನು ನೇಣು ಹಾಕಿಕೊಂಡ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಕ್ಕಳು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ತಾಯಿ ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಘಟನೆ ನಡೆದಿದೆ.

ಫಕ್ಕೀರಪ್ಪ ಮಾದರ (35) ಆತ್ಮಹತ್ಯೆ ಮಾಡಿಕೊಂಡವರು. ಶ್ರೇಯಸ್ (6), ಶ್ಯಾಮಲಾ (8) ಹಾಗೂ ಸೃಷ್ಟಿ (4) ಮೃತ ಮಕ್ಕಳು.

ADVERTISEMENT

ಗಂಭೀರವಾಗಿ ಗಾಯಗೊಂಡಿರುವ 30 ವರ್ಷದ ಪತ್ನಿ ಮುದುಕವ್ವ ಅವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಪಡೆಯುತ್ತಿದ್ದಾರೆ.

‘ಫಕ್ಕೀರಪ್ಪ ಮದ್ಯ ವ್ಯಸನಿಯಾಗಿದ್ದ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೃತ್ಯಕ್ಕೆ ಕಾರಣ ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್‌ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ಅವರು ತಿಳಿಸಿದ್ದಾರೆ.

ಗ್ರಾಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ
ಯಿಂದಾಗಿ ಗ್ರಾಮದಲ್ಲಿ ಮೌನ ಆವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.