ರೈಲು
– ಪ್ರಜಾವಾಣಿ ಚಿತ್ರ
ಹುಬ್ಬಳ್ಳಿ: ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ಮುಜಫರ್‌ಪುರ– ಹುಬ್ಬಳ್ಳಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೊಳಿಸುವುದಾಗಿ ಪೂರ್ವ ಮಧ್ಯ ರೈಲ್ವೆ ತಿಳಿಸಿದೆ.
ಈ ವಿಶೇಷ ರೈಲು ಅ.10ರಿಂದ ನ.14ರ ವರೆಗೆ ಆರು ಟ್ರಿಪ್ ಸಂಚರಿಸಲಿದ್ದು, ಪ್ರತಿ ಶುಕ್ರವಾರ ಮಧ್ಯಾಹ್ನ 12.45ಕ್ಕೆ ಮುಜಫರ್‌ಪುರದಿಂದ (05543) ಹೊರಟು, ಸೋಮವಾರ ಮಧ್ಯಾಹ್ನ 12.20ಕ್ಕೆ ಹುಬ್ಬಳ್ಳಿ ತಲುಪುತ್ತದೆ. ಅ.14ರಿಂದ ನ.18ರವರೆಗೆ ಪ್ರತಿ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿಯಿಂದ (05544) ಹೊರಟು ಶುಕ್ರವಾರ ಬೆಳಿಗ್ಗೆ 5 ಗಂಟೆಗೆ ಮುಜಫರ್‌ಪುರ ತಲುಪುಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.