
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಹುಬ್ಬಳ್ಳಿ: ಇಲ್ಲಿನ ಗೋಪನಕೊಪ್ಪ-ಸುಳ್ಳ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಐದು ಮಂದಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ, 100 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಅಬ್ದುಲ್‌ಖಾದಿರ್, ಮನೋಜಕುಮಾರ, ಉಮರ್, ವಿಕ್ರಾಂತ್‌ಕುಮಾರ ಮತ್ತು ಅಜರ್‌ಖಾಜಿ ಬಂಧಿತರು. ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಪ್ರಕರಣ ದಾಖಲಾಗಿದೆ.
ಆಭರಣ ಕಳವು: ಇಲ್ಲಿಯ ಉಣಕಲ್‌ನ ಶ್ರೀಗನಗರದ ರಾಜೇಶ್ವರಿ ಅವರ ಮನೆಯಲ್ಲಿ ₹1.80 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ‘ಆಭರಣವನ್ನು ಮಗಳು ಮೇಘಾ ಕಳವು ಮಾಡಿದ್ದಾಳೆ’ ಎಂದು ತಾಯಿ ರಾಜೇಶ್ವರಿ ಅವರು ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.