ADVERTISEMENT

‘ಐದು ದಿನ ಮಳೆ ಸಾಧ್ಯತೆ’

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 4:50 IST
Last Updated 8 ಆಗಸ್ಟ್ 2022, 4:50 IST
ಶ್ರೀನಾಥ ಚಿಮ್ಮಲಗಿ
ಶ್ರೀನಾಥ ಚಿಮ್ಮಲಗಿ   

ನವಲಗುಂದ: ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ಐದು ದಿನಗಳ ಕಾಲ ಗುಡುಗು– ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಸಹಾಯಕ ಕೃಷಿ ನಿರ್ದೇಶಕ ಶ್ರೀನಾಥ್ ಚಿಮ್ಮಲಗಿ ತಿಳಿಸಿದ್ದಾರೆ.

ನವಲಗುಂದ ತಾಲ್ಲೂಕಿನಲ್ಲಿ ವಾಡಿಕೆಯ ಶೇ 45ರಷ್ಟು ಹಾಗೂ ಅಣ್ಣಿಗೇರಿಯಲ್ಲಿ ಶೇ 39ರಷ್ಟು ಹೆಚ್ಚು ಮಳೆಯಾಗಿದೆ.

‘ಬೆಳೆ ಹಾನಿಯಾದರೆ ಮಳೆಯಾಗಿ 72 ಗಂಟೆಯಲ್ಲಿ ಕೃಷಿ ಇಲಾಖೆ ಕಚೇರಿಗೆ ಬಂದು ಅರ್ಜಿ ಸಲ್ಲಿಸಬಹುದು’ ಎಂದು ತಿಳಿಸಿದ್ದಾರೆ.

ADVERTISEMENT

‘ತಾಲ್ಲೂಕಿನಾದ್ಯಂತ ಹೆಸರು, ಶೇಂಗಾ, ಹತ್ತಿ, ಈರುಳ್ಳಿ, ಮೆಣಸಿನಕಾಯಿ, ಗೋವಿನ ಜೋಳದ ಬೆಳೆಗಳು ನಾಶವಾಗಿವೆ. ಬೆಣ್ಣೆಹಳ್ಳ ಹಾಗೂ ತುಪ್ಪರಿ ಹಳ್ಳದ ಹೆಚ್ಚಿನ ಹರಿವಿನಿಂದಾಗಿ ರೈತರು ಬೆಳೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ’ ಎಂದು ರೈತ ಮುಖಂಡ ಮಾಬುಸಾಬ ಯರಗುಪ್ಪಿ ಹೇಳಿದ್ದಾರೆ.

‘ರಾಜ್ಯ ಸರ್ಕಾರ ಈ ಕೂಡಲೇ ರೈತರ ಖಾತೆಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರದ ಹಣ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.