ಹುಬ್ಬಳ್ಳಿ: ನಗರದ ಕಿತ್ತೂರು ಚನ್ನಮ್ಮ ವೃತ್ತದ ಬಳಿ ಪ್ರಗತಿಯಲ್ಲಿರುವ ಮೇಲ್ಸೇತುವೆ ಕಾಮಗಾರಿ ವಿಳಂಬವಾಗುತ್ತಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಕ್ರಮವಹಿಸುವಂತೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಶಾಸಕ ಮಹೇಶ ಟೆಂಗಿನಕಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
‘ಸ್ಮಾರ್ಟ್‌ಸಿಟಿ ಯೋಜನೆಯಡಿ ಹಲವಾರು ಕಾಮಗಾರಿಗಳು ಇನ್ನೂ ಅಪೂರ್ಣ ಸ್ಥಿತಿಯಲ್ಲಿವೆ. ಮೇಲ್ಸೇತುವೆಗೆ ಹೊಂದಿಕೊಂಡ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಡಾಂಬರೀಕರಣ ಮೂಲಕ ರಸ್ತೆಗಳ ಸುಧಾರಣೆಗೆ ಮುಂದಾಗಬೇಕು’ ಎಂದು ಕೋರಿದರು.
ಇದಕ್ಕೆ ಸ್ಪಂದಿಸಿದ ಶಾಸಕರು, ನಗರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಸಂಸ್ಥೆಯ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ, ಉಪಾಧ್ಯಕ್ಷ ಪ್ರವೀಣ ಅಗಡಿ, ಸಿದ್ದೇಶ್ವರ ಕಮ್ಮಾರ, ಗೌರವ ಕಾರ್ಯದರ್ಶಿ ಉದಯ ಎಂ. ರೇವಣಕರ, ಪ್ರಕಾಶ ಶೃಂಗೇರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.