ಆಸ್ಪತ್ರೆಯಲ್ಲಿ ಚಿಕಿತ್ಸೆ
ನವಲಗುಂದ (ಧಾರವಾಡ ಜಿಲ್ಲೆ): ತಾಲ್ಲೂಕಿನ ಗುಡಿಸಾಗರ ಗ್ರಾಮದ 20 ಕ್ಕೂ ಹೆಚ್ಚು ಮಂದಿಗೆ ವಾಂತಿಭೇದಿಯಾಗಿದೆ. ಕೆರೆ ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.
ನವಲಗುಂದ ಸರ್ಕಾರಿ ಆಸ್ಪತ್ರೆಗೆ 19 ಮಂದಿ ದಾಖಲಾಗಿದ್ಧಾರೆ. ಈ ಪೈಕಿ ಒಂಬತ್ತು ಪುರುಷರು, ಎಂಟು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಇದ್ದಾರೆ.
‘ಕೆರೆ ನೀರು ಸ್ವಚ್ಚವಾಗಿಲ್ಲ. ಆ ನೀರನ್ನೇ ನಳಗಳಲ್ಲಿ ಗ್ರಾಮಕ್ಕೆ ಪೂರೈಸಲಾಗುತ್ತಿದೆ’ ಎಂದು ಆಸ್ಪತ್ರೆಗೆ ದಾಖಲಾಗಿರುವ ಹೇಮವ್ವ ಫಕೀರಪ್ಪ ಬಾಗೂರು ’ಪ್ರಜಾವಾಣಿ’ಗೆ ತಿಳಿಸಿದರು.
‘19 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಗುಡಿಸಾಗರದಲ್ಲೂ ತಾತ್ಕಾಲಿಕ ಕ್ಲಿನಿಕ್ ವ್ಯವಸ್ಥೆ ಮಾಡಲಾಗಿದೆ. ಅಸ್ವಸ್ಥರ ರಕ್ತ ಪರೀಕ್ಷೆ ಮಾಡಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ.ಹೊನಕೇರಿ ತಿಳಿಸಿದರು.
‘ನೀರಿನ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗುವುದು. ಕಾಲರಾ, ಡೆಂಗಿ ಪರೀಕ್ಷೆ ಮಾಡಲು ವೈದ್ಯರಿಗೆ ತಿಳಿಸಲಾಗಿದೆ. ವರದಿ ಬಂದ ನಂತರ ಕಾರಣ ತಿಳಿಯಲಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.