ADVERTISEMENT

ವನ ಸಂರಕ್ಷಣೆ ಪವಿತ್ರ ಕಾಯಕ: ಸಚಿವ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 4:14 IST
Last Updated 16 ಸೆಪ್ಟೆಂಬರ್ 2025, 4:14 IST
ಧಾರವಾಡದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿದರು 
ಧಾರವಾಡದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿದರು    

ಧಾರವಾಡ: ‘ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪ್ಯರೀತ್ಯದಿಂದ ವನ, ವನ್ಯ ಜೀವಿಗಳ ಸಂರಕ್ಷಣೆಯ ಜವಾಬ್ದಾರಿ ಹಿಂದಿಗಿಂತಲೂ ಹೆಚ್ಚಾಗಿದೆ. ಅರಣ್ಯ ಅಧಿಕಾರಿ ಸಿಬ್ಬಂದಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದ ಆರ್.ಎನ್.ಶೆಟ್ಟಿ ಜಿಲ್ಲಾಕ್ರೀಡಾಂಗಣದಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಅರಣ್ಯ ಇಲಾಖೆ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಸಂವಿಧಾನದ 51 (ಎ) ಪರಿಚ್ಛೇದದಲ್ಲಿ ಅರಣ್ಯ, ಸರೋವರ, ನದಿ, ವನ್ಯಜೀವಿಗಳು ಸೇರಿದಂತೆ ನೈಸರ್ಗಿಕ ಪರಿಸರವನ್ನು ರಕ್ಷಿಸುತ್ತೇನೆ ಮತ್ತು ಉತ್ತಮಪಡಿಸುತ್ತೇನೆ. ಜೀವಂತ ಜೀವಿಗಳ ಬಗ್ಗೆ ಸಹಾನುಭೂತಿ ಹೊಂದಿರುತ್ತೇನೆ ಎಂದಿದೆ. ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ಪ್ರಕೃತಿ ಪರಿಸರ ರಕ್ಷಿಸಬೇಕು’ ಎಂದರು.

‘ಸೌಲಭ್ಯ ರಹಿತ ಕಾನನ ಪ್ರದೇಶದಲ್ಲಿ, ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಅರಣ್ಯ ಸಿಬ್ಬಂದಿಗೆ ಕ್ರೀಡಾಕೂಟಗಳು ಮನರಂಜನೆಯ ಜೊತೆಗೆ ಒತ್ತಡ ನಿವಾರಿಸಲು ಸಹಕಾರಿಯಾಗಿದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸದೃಢ ಯುವಶಕ್ತಿಯ ಅಗತ್ಯವಿದ್ದು, ಕ್ರೀಡಾ ಚಟುವಟಿಕೆ ಯುವಜನರನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢಗೊಳಿಸುತ್ತದೆ’ ಎಂದು ಹೇಳಿದರು.

ಶಾಸಕ ಎನ್.ಎಚ್. ಕೋನರೆಡ್ಡಿ, ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.