ಹುಬ್ಬಳ್ಳಿ: ನಾಡಿನ ಅಭಿವೃದ್ಧಿ ಹಾಗೂ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಹಗಲಿರುಳು ತಮ್ಮನ್ನು ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಿ ಹೊರ ಬರಲಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹಾರೈಸಿದ್ದಾರೆ.
ಸೋಂಕಿನ ಲಕ್ಷಣಗಳಿಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರ ಗುಣಮುಖರಾಗಿ ರಾಜ್ಯದ ಜನತೆಗೆ ಪುನಃ ಅವರ ದಕ್ಷ ಮತ್ತು ನಿಸ್ವಾರ್ಥ ಸೇವೆ ದೊರಕುವಂತಾಗಲಿ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.