ಕುಂದಗೋಳ: ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ರೈತರು ಕಡಲೆ ಬೆಳೆ ಬಿತ್ತನೆ ಮಾಡಿದ್ದು, ಅತಿಯಾದ ಮಳೆಯಿಂದ ಶೇ 80ರಷ್ಟು ಬೆಳೆ ಹಾನಿಯಾಗಿದೆ. ಮತ್ತೆ ಬಿತ್ತನೆಗೆ ರೈತರಿಗೆ ಕಡಲೆ ಜೀಜ ಉಚಿತವಾಗಿ ನೀಡಬೇಕು, ₹ 5 ಲಕ್ಷದ ವರೆಗಿನ ಬೆಳೆ ಸಾಲ ಮನ್ನಾ ಮಾಡಬೇಕು, ಮೆಕ್ಕೆಜೋಳ ಸೇರಿದಂತೆ ಇತರ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಬೆಳೆ ಪರಿಹಾರ ಹೆಕ್ಟೇರ್‌ಗೆ ₹ 50 ಸಾವಿರ ನೀಡುವಂತೆ ಆಗ್ರಹಿಸಿದರು.
ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಕಲ್ಲಪ್ಪ ಹರಕುಣಿ, ಜಿಲ್ಲಾ ಘಟಕದ ಅಧ್ಯಕ್ಷ ಸಾಗರ ಗಾಯಕವಾಡ, ಹನಮಂತ ಮೇಟಿ, ರೆಹಮಾನ್ ಹೋಳಿಯವರ, ಸಚಿನ್ ಗಾಣಿಗೇರ, ಮಲ್ಲಿಕ್ ಕಂಬಾರಗಣವಿ, ಸಚಿನ್ ಪವಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.