ADVERTISEMENT

ಬಡ ಮಕ್ಕಳಿಗೆ ವಸತಿ ಸಹಿತ ಉಚಿತ ಶಿಕ್ಷಣ; ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 13 ಮೇ 2022, 4:05 IST
Last Updated 13 ಮೇ 2022, 4:05 IST
ಹುಬ್ಬಳ್ಳಿಯಲ್ಲಿ ನಡೆದ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ, ರಜತ್‌ ಉಳ್ಳಾಗಡ್ಡಿಮಠ ಸೇರಿದಂತೆ ಹಲವರು ಪಾಲ್ಗೊಂಡಿದ್ದರು
ಹುಬ್ಬಳ್ಳಿಯಲ್ಲಿ ನಡೆದ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ, ರಜತ್‌ ಉಳ್ಳಾಗಡ್ಡಿಮಠ ಸೇರಿದಂತೆ ಹಲವರು ಪಾಲ್ಗೊಂಡಿದ್ದರು   

ಹುಬ್ಬಳ್ಳಿ: ನಗರದ ಗೋಕುಲ ಗ್ರಾಮದ ತಾರಿಹಾಳ ರಸ್ತೆಯಲ್ಲಿ ಇರುವ ಡಿ.ಪಿ. ಮಧೂರಕರ ಮೆಮೋರಿಯಲ್ ಟ್ರಸ್ಟ್‌ನ ಗೋರಕ್ಷ ನಾಥ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ವಸತಿ ನಿಲಯದಲ್ಲಿ ಬಡ ಗ್ರಾಮೀಣ ಭಾಗದ 1ರಿಂದ 10ನೇ ತರಗತಿ ಮಕ್ಕಳಿಗೆ ವಸತಿ ಸಹಿತ ಉಚಿತ ಶಿಕ್ಷಣ ನೀಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಎಸ್.ಡಿ. ಮಧೂರಕರ ತಿಳಿಸಿದರು.

ಟ್ರಸ್ಟ್‌ನಿಂದ ಸುಮಾರು 40 ವರ್ಷಗಳಿಂದ ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ. ಸದ್ಯ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದು, ಪ್ರತಿವರ್ಷ 150ಕ್ಕೂ ಹೆಚ್ಚು ಮಕ್ಕಳು ಪ್ರವೇಶ ಪಡೆಯುತ್ತಿದ್ದಾರೆ. ಶಾಲೆಯಲ್ಲಿ ಅನುಭವುಳ್ಳ ಶಿಕ್ಷಕರಿದ್ದಾರೆ. ಶಿಕ್ಷಣ ಮತ್ತು ಕ್ರೀಡೆಯಲ್ಲಿ ಶಾಲಾ ಮಕ್ಕಳು ಪ್ರತಿವರ್ಷವೂ ಸಾಧನೆ‌ ಮಾಡಿದ್ದಾರೆ. ಇಲ್ಲಿ ಕಲಿತ ಸಾವಿರಾರು ಮಕ್ಕಳು ಉತ್ತಮ ಜೀವನ ರೂಪಿಸಿಕೊಂಡಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆಸಕ್ತ ವಿದ್ಯಾರ್ಥಿಗಳು ಮೇ 16ರೊಳಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಅಂಕಪಟ್ಟಿ, ಆಧಾರ್ ಕಾಡ್೯, ಪಡಿತರ ಕಾಡ್೯ ಜೆರಾಕ್ಸ್, ಪಾಸ್‌ಪೋರ್ಟ್ ಅಳತೆಯ 4 ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ 9741997214 (ಕೆ.ಎನ್.
ಕಾಟೇನವರ) ಮತ್ತು 96630
56775 (ಆರ್‌.ಎಚ್. ಜೋಗಿ) ಸಂಪರ್ಕಿಸಬಹುದು ಎಂದರು.

ADVERTISEMENT

ಶಾಲೆಯ ಮುಖ್ಯ ಶಿಕ್ಷಕ ಎಂ.ಡಿ. ಹೊಟ್ಟಿಗೌಡ,ಕೆ.ಎನ್. ಕಾಟೇನವರ, ಡಾ. ಆನಂದಪ್ಪ ಜೋಗಿ ಹಾಗೂ ಪಾಂಡುರಂಗ ಮಧೂರಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.