ಹುಬ್ಬಳ್ಳಿ: ಮಹಾರಾಷ್ಟ್ರದ ಪುಣೆಯಲ್ಲಿರುವ ಫ್ರೆಂಡ್ಸ್ ಯುನಿಯನ್ ಫಾರ್ ಎನರ್ಜೈಜಿಂಗ್ ಲೈವ್ಸ್ (ಫ್ಯುಲ್) ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಡಿಪ್ಲೊಮಾ ಇನ್ ಮ್ಯಾನೇಜ್‌ಮೆಂಟ್ (ಪಿಜಿಡಿಎ) ಸ್ನಾತಕೋತ್ತರ ಕೋರ್ಸ್ ಯಶಸ್ವಿಯಾಗಿ ನಡೆಯುತ್ತಿದೆ. ವಾರ್ಷಿಕ ₹3 ಲಕ್ಷ ಹಾಗೂ ಅದಕ್ಕಿಂತ ಕಡಿಮೆ ಆದಾಯವಿರುವ ವಿದ್ಯಾರ್ಥಿನಿಯರಿಗೆ ಸಿಎಸ್‌ಆರ್ ಯೋಜನೆಯಡಿ ಈ ಕೋರ್ಸ್‌ಗೆ ಉಚಿತವಾಗಿ ಪ್ರವೇಶ ನೀಡಲಾಗುವುದು ಎಂದು ಸಂಸ್ಥೆಯ ಸದಸ್ಯೆ ಮಯೂರಿ ದೇಶಪಾಂಡೆ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಮಾನ್ಯತೆ ಪಡೆದಿರುವ ಕಾಲೇಜಿನಲ್ಲಿ ಕಳೆದ 18 ವರ್ಷಗಳಲ್ಲಿ ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ನಾತಕೋತ್ತರ ಪೂರ್ಣಗೊಳಿಸಿ ಉದ್ಯೋಗ ಪಡೆದಿದ್ದಾರೆ. ಒರಾಕಲ್, ಡಿಬಿಎಸ್, ಕ್ಯಾಸ್ಟ್ರಾಲ್ ಸೇರಿದಂತೆ 32 ಕಂಪೆನಿಗಳು ಸಿಎಸ್‌ಆರ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುತ್ತಿದ್ದಾರೆ ಎಂದರು.
ಹುಬ್ಬಳ್ಳಿಯಲ್ಲೂ ಮುಂದಿನ ವರ್ಷದಿಂದ ಫ್ಯುಲ್ ಕಾಲೇಜು ಕಾರ್ಯಾರಂಭ ಮಾಡಲಿದೆ. ಸದ್ಯ ಶಿರೂರ ಪಾರ್ಕ್ ಬಳಿ ಅಸ್ತ್ರಾ ಟವರ್‌ನಲ್ಲಿ ತರಬೇತಿ ಕೇಂದ್ರ ನಡೆಸಲಾಗುತ್ತಿದೆ. ಪ್ರತಿ ತಿಂಗಳು ಸುಮಾರು 40 ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ನೀಡಲಾಗುತ್ತಿದೆ ಎಂದು ಸಂಸ್ಥೆಯ ಮುಖ್ಯಸ್ಥೆ ಪಲ್ಲವಿ ಹುರುಳಿಕೊಪ್ಪಿ ತಿಳಿಸಿದರು. ಹೆಚ್ಚಿನ ಮಾಹಿತಿಗೆ 86000 35491 ಸಂಖ್ಯೆಗೆ ಸಂಪರ್ಕಿಸಬಹುದು.
ತರಬೇತುದಾರ ಡೇವಿಡ್ ಜಾರ್ಜ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.