ADVERTISEMENT

ಇಂಧನ ದರ ಏರಿಕೆ | ಬಿಜೆಪಿ ಖಂಡಿಸಲಿ: ಶಾಸಕ ಪ್ರಸಾದ ಅಬ್ಬಯ್ಯ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2025, 15:49 IST
Last Updated 8 ಏಪ್ರಿಲ್ 2025, 15:49 IST
ಪ್ರಸಾದ ಅಬ್ಬಯ್ಯ
ಪ್ರಸಾದ ಅಬ್ಬಯ್ಯ   

ಹುಬ್ಬಳ್ಳಿ: ಇಂಧನ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಪ್ರತಿಭಟನೆ ನಡೆಸಲಿ ಎಂದು ಶಾಸಕ ಪ್ರಸಾದ ಅಬ್ಬಯ್ಯ ಸವಾಲು ಹಾಕಿದ್ದಾರೆ.

ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿಯವರು ವಿರೋಧಿಸಿದರು. ಆದರೆ, ಬೇರೆ ರಾಜ್ಯಗಳಿಂತ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆಯಿದೆ ಎಂಬ ಸಾಮಾನ್ಯ ಜ್ಞಾನವೂ ಬಿಜೆಪಿಗೆ ಇಲ್ಲ. ಬೆಲೆ ಏರಿಕೆಗೆ ಕೇಂದ್ರದ ಆರ್ಥಿಕ ನೀತಿಯೇ ಕಾರಣ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಕಚ್ಚಾ ತೈಲ ದರ ಕಡಿಮೆ ಇದ್ದರೂ, ಕೇಂದ್ರ ಸರ್ಕಾರವು ಇಂಧನ ದರ ನಿಯಂತ್ರಿಸುತ್ತಿಲ್ಲ. ಕೇಂದ್ರದ ದ್ವಂದ್ವ ನೀತಿಯನ್ನು ಬಿಜೆಪಿಯವರು ಅರಿತುಕೊಂಡು, ನಂತರ ರಾಜ್ಯ ಸರ್ಕಾರಕ್ಕೆ ಪಾಠ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಕೇಂದ್ರದ ದುರಾಡಳಿತದಿಂದ ತರಕಾರಿ ಹಾಗೂ ಬೇಳೆ ಕಾಳುಗಳ ಬೆಲೆ ಒಂದೂವರೆ ಪಟ್ಟು ಹೆಚ್ಚಾಗಿದೆ. ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿದೆ. ಜೀವ ವಿಮೆ, ಆರೋಗ್ಯ ವಿಮೆ, ಕೃಷಿ ಉತ್ಪನ್ನಗಳ ಮೇಲೂ ತೆರಿಗೆ ಭಾರ ಹೇರಲಾಗಿದೆ. 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದವರಿಂದ ದಂಡವಾಗಿ ₹43,500 ಕೋಟಿ ಲೂಟಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.  

ರಾಜ್ಯದ ಬಿಜೆಪಿಯವರಿಗೆ ಜನಪರ ಕಾಳಜಿ ಇದ್ದರೆ, ಬೆಲೆ ಏರಿಕೆ ನಿಯಂತ್ರಣದ ಕುರಿತಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯಲಿ ಎಂದೂ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.