
ಹುಬ್ಬಳ್ಳಿ: ‘ಬಿಟ್ ಕಾಯಿನ್’ ಹಗರಣದಲ್ಲಿ ಭಾಗಿಯಾದವರ ಪೈಕಿ ಕಾಂಗ್ರೆಸ್ ಮುಖಂಡರ ಹೆಸರುಗಳಿವೆ ಎನ್ನುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಜಿ. ಪರಮೇಶ್ವರ ‘ಕೂಡಲೇ ಹೆಸರುಗಳನ್ನು ಬಹಿರಂಗಗೊಳಿಸಬೇಕು’ ಎಂದು ಸವಾಲು ಹಾಕಿದ್ದಾರೆ.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಈ ಹಗರಣದಿಂದ ಯಾವ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಉದ್ಯಮಿಗಳು ಲಾಭ ಪಡೆದುಕೊಂಡಿದ್ದಾರೆ ಎನ್ನುವುದನ್ನು ಮುಖ್ಯಮಂತ್ರಿ ಬಹಿರಂಗಗೊಳಿಸಬೇಕು. ನಮ್ಮ ಪಕ್ಷದವರು ಹೆಸರುಗಳಿದ್ದರೆ ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿ. ನಾವು ಪಕ್ಷದ ವತಿಯಿಂದಲೂ ಕ್ರಮ ಕೈಗೊಳ್ಳುತ್ತೇವೆ’ ಎಂದರು.
‘ಹಗರಣದಲ್ಲಿ ಭಾಗಿಯಾದವರ ಪೈಕಿ ಎರಡ್ಮೂರು ಹೆಸರುಗಳು ನನಗೂ ಗೊತ್ತಿವೆ. ಖಚಿತವಾಗದ ಹೊರತು ಬಹಿರಂಗಪಡಿಸುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.