ADVERTISEMENT

ಗಾಂಧೀಜಿ, ಶಾಸ್ತ್ರೀಜಿ ಆದರ್ಶ ಪಾಲಿಸಿ: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 4:54 IST
Last Updated 3 ಅಕ್ಟೋಬರ್ 2025, 4:54 IST
<div class="paragraphs"><p>ಧಾರವಾಡದ ಗಾಂಧಿ ಭವನದಲ್ಲಿ ನಡೆದ ಜಂಯತ್ಯುತ್ಸವದಲ್ಲಿ ಬಾಪೂಜಿ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಮಾಣ ಪತ್ರ, ನಗದು ಪುರಸ್ಕಾರ ವಿತರಿಸಲಾಯಿತು</p></div>

ಧಾರವಾಡದ ಗಾಂಧಿ ಭವನದಲ್ಲಿ ನಡೆದ ಜಂಯತ್ಯುತ್ಸವದಲ್ಲಿ ಬಾಪೂಜಿ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಮಾಣ ಪತ್ರ, ನಗದು ಪುರಸ್ಕಾರ ವಿತರಿಸಲಾಯಿತು

   

ಧಾರವಾಡ: ‘ಗಾಂಧೀಜಿ ಅವರು ದೇಶವು ಸದಾಕಾಲಕ್ಕೂ ನೆನಪಿಡುವ ಮಹನೀಯರು. ಅವರು ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳವಳಿ, ಸ್ವದೇಶಿ ಚಳವಳಿ ಸೇರಿ ಅನೇಕ ಆಂದೋಲನಗಳನ್ನು ಜನಾಂದೋಲನವಾಗಿ ಪರಿವರ್ತಿಸಿದರು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಇಲಾಖೆಯಿಂದ ಗುರುವಾರ ನಡೆದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ‘ಬ್ರಿಟಿಷರ ಆಳ್ವಿಕೆಯಿಂದ ಭಾರತವನ್ನು ಸ್ವತಂತ್ರಗೊಳಿಸಲ್ಲಿ ಗಾಂಧೀಜಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಆದರ್ಶ, ತತ್ವಗಳು ಇಂದಿಗೂ ಪ್ರಸ್ತುತ’ ಎಂದರು.

ADVERTISEMENT

‘ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಪ್ರಧಾನಿಯಾಗಿ ಅಲ್ಪಾವಧಿಯಲ್ಲಿಯೂ ಉತ್ತಮ ಆಡಳಿತ ನೀಡಿದರು. ನೈತಿಕತೆಯಿಂದ ಜೀವನ ನಡೆಸಿದರು. ನಾವೆಲ್ಲರೂ ಗಾಂಧೀಜಿ ಮತ್ತು ಶಾಸ್ತ್ರಿ ಅವರ ಆದರ್ಶಗಳನ್ನು ಪಾಲಿಸಬೇಕು’ ಎಂದು ಹೇಳಿದರು.

ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿ, ‘ಗಾಂಧೀಜಿ ಅವರು ಸತ್ಯ, ಸ್ವಚ್ಛತೆ ಮತ್ತು ಗ್ರಾಮ ಸ್ವರಾಜ್ಯದ ಸಂಕಲ್ಪಕ್ಕೆ ಮಹತ್ವ ನೀಡಿದ್ದರು. ಗಾಂಧೀಜಿ ಅವರು ಗ್ರಾಮ ಸ್ವರಾಜ್ಯದ ಸಂಕಲ್ಪ ಹಾಗೂ ಅಧಿಕಾರ ವಿಕೇಂದ್ರಿಕರಣ ವ್ಯವಸ್ಥೆಗೆ ಬುನಾದಿ ಹಾಕಿದರು. ಪ್ರಜಾಪ್ರಭುತ್ವ ಗಟ್ಟಿಯಾಗಲು ಗ್ರಾಮ ವ್ಯವಸ್ಥೆ ಮುಖ್ಯ. ಆರ್ಥಿಕ, ಸಾಮಾಜಿಕ ಸಮಾನತೆಗೆ ಎಲ್ಲರೂ ಮುಂದಾಗಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ಪಾಟೀಲ ಮಾತನಾಡಿ, ‘ಗಾಂಧೀಜಿ ಅವರ ತತ್ವದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಜೀವನ ಸಾಗಿಸಿದ್ದಾರೆ. ಗಾಂಧೀಜಿಯವರ ಅಹಿಂಸೆ ತತ್ವ ನಮಗೆ ದಾರಿದೀಪವಾಗಿದೆ. ಅದೇ ಮಾರ್ಗದಲ್ಲಿ ನಾವು ನಡೆಯಬೇಕು’ ಎಂದು ಹೇಳಿದರು.

‘ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಪಾಕಿಸ್ತಾನ ವಿರುದ್ಧ ಯುದ್ಧ ಸಂದರ್ಭದಲ್ಲಿ ಬಹಳ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಸಮಾಜಕ್ಕೆ ಕೊಡುಗೆ ನೀಡಲು ಎಲ್ಲರೂ ಅಣಿಯಾಗಬೇಕು’ ಎಂದರು.

ಡಾ.ನಿತಿನ್‍ಚಂದ್ರ ಹತ್ತೀಕಾಳ ಮಾತನಾಡಿ, ‘ಗಾಂಧೀಜಿ ಅವರು ದಕ್ಷಿಣ ಆಫ್ರಿಕಾದಲ್ಲಿ ಅಸ್ಪೃಶ್ಯತೆ ವಿರುದ್ಧ ಹೋರಾಡಿದರು. ಅಲ್ಲಿಂದ ಭಾರತಕ್ಕೆ ಹಿಂತಿರುಗಿ ಸ್ವಾತಂತ್ರ್ಯ ಹೋರಾಟ ಆರಂಭಿಸಿ ಕ್ವಿಟ್ ಇಂಡಿಯಾ, ಚಲೇ ಜಾವ್ ಚಳವಳಿ ಸೇರಿದಂತೆ ಅನೇಕ ಹೋರಾಟಗಳಲ್ಲಿ ಭಾಗಿಯಾದರು ಎಂದರು. 

ಡೇವಿಡ್, ಹಫೀಜ್ ಖಾದ್ರಿ ಮತ್ತು ಮಹೇಶ ಭಟ್ ಅವರು ಸರ್ವಧರ್ಮ ಪ್ರಾರ್ಥನೆಯನ್ನು ಸಲ್ಲಿಸಿದರು. ಬಾಲಬಳಗ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಚರಕದಿಂದ ಹತ್ತಿಯ ನೂಲು ತೆಗೆಯುವುದನ್ನು ಪ್ರದರ್ಶಿಸಿದರು.  ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಮಾಜಿ ಸಂಸದ ಐ.ಜಿ.ಸನದಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಡಿಡಿಪಿಐ ಎಸ್.ಎಸ್.ಕೆಳದಿಮಠ, ಡಾ.ಸಂಜೀವ ಕುಲಕರ್ಣಿ, ರಾಜೇಂದ್ರ ಪೊದ್ದಾರ್‌, ಪಾಲಿಕೆಯ ವಲಯ ಸಹಾಯಕ ಆಯುಕ್ತ ಅರವಿಂದ ಜಮಖಂಡಿ, ವಾರ್ತಾ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಎಸ್.ಎಂ.ಹಿರೇಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.