ADVERTISEMENT

ಹುಬ್ಬಳ್ಳಿ: ಗಾಂಧೀಜಿ, ಶಾಸ್ತ್ರೀಜಿ ಸಂದೇಶ ಸ್ಮರಣೆ

ಭಾವಚಿತ್ರ, ಪುತ್ಥಳಿಗೆ ಮಾಲಾರ್ಪಣೆ–ಪುಷ್ಪನಮನ: ಸತ್ಯೆ, ಅಹಿಂಸಾ ತತ್ವದ ಅನುರಣನ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 4:51 IST
Last Updated 3 ಅಕ್ಟೋಬರ್ 2025, 4:51 IST
ಹುಬ್ಬಳ್ಳಿಯ ಕೆಎಂಸಿ–ಆರ್‌ಐ ಆಸ್ಪತ್ರೆ ಮುಂಭಾಗದ ಗಾಂಧಿ ಪುತ್ಥಳಿಗೆ ಹು–ಧಾ ಮಹಾನಗರ ಪಾಲಿಕೆ ಉಪಮೇಯರ್ ಸಂತೋಷ ಚವ್ಹಾಣ ಪುಷ್ಪಾರ್ಚನೆ ಮಾಡಿದರು
ಹುಬ್ಬಳ್ಳಿಯ ಕೆಎಂಸಿ–ಆರ್‌ಐ ಆಸ್ಪತ್ರೆ ಮುಂಭಾಗದ ಗಾಂಧಿ ಪುತ್ಥಳಿಗೆ ಹು–ಧಾ ಮಹಾನಗರ ಪಾಲಿಕೆ ಉಪಮೇಯರ್ ಸಂತೋಷ ಚವ್ಹಾಣ ಪುಷ್ಪಾರ್ಚನೆ ಮಾಡಿದರು   

ಹುಬ್ಬಳ್ಳಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಯಂತಿ ಪ್ರಯುಕ್ತ ನಗರ ಸೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಅವರ ಸಂದೇಶ ಸಾರುವ ವಿವಿಧ ಕಾರ್ಯಕ್ರಮಗಳು ಗುರುವಾರ ನಡೆದವು.

ಮಾಲಾರ್ಪಣೆ: ನಗರದ ಕೆಎಂಸಿ–ಆರ್‌ಐ ಮುಂಭಾಗದ ಗಾಂಧಿ ಪುತ್ಥಳಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಉಪಮೇಯರ್ ಸಂತೋಷ ಚವ್ಹಾಣ ಮಾಲಾರ್ಪಣೆ ಮಾಡಿದರು. ಪಾಲಿಕೆ ಕಚೇರಿಯಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಆಯುಕ್ತ ರುದ್ರೇಶ ಘಾಳಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ವಿರೋಧ ಪಕ್ಷದ ನಾಯಕ ಇಮ್ರಾನ್ ಎಲಿಗಾರ, ಸಾರ್ವಜನಿಕ ಸಂಪರ್ಕಾಧಿಕಾರಿ ಉಮೇಶ್ ಸವಣೂರು, ಆರೋಗ್ಯಾಧಿಕಾರಿ ಶ್ರೀಧರ ದಂಡೆಪ್ಪನವರ, ಕಾರ್ಯನಿರ್ವಾಹಕ ಎಂಜಿನಿಯರ್‌ ಸಂತೋಷ ಯರಂಗಳಿ ಇದ್ದರು.

ಉತ್ತರ ಕರ್ನಾಟಕ ಆಟೊರಿಕ್ಷಾ ಚಾಲಕರ ಸಂಘ ಹಾಗೂ ಆಟೊರಿಕ್ಷಾ ಮಾಲೀಕರು–ಚಾಲಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರು ಗಾಂಧಿ ಪುತ್ಥಳಿಗೆ ನಮನ ಸಲ್ಲಿಸಿದರು.

ADVERTISEMENT

ಬಿಜೆಪಿ ಕಚೇರಿ: ಬಿಜೆಪಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಘಟಕದ ಕಚೇರಿಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜನ್ಮದಿನ ಆಚರಿಸಲಾಯಿತು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, ‘ಸ್ವಾತಂತ್ರ್ಯ ಹೋರಾಟದ ಮುಂದಾಳತ್ವ ವಹಿಸಿದ್ದ ಗಾಂಧೀಜಿ, ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು. ಸ್ವಚ್ಛತೆಗೆ ಹೆಚ್ಚಿನ ಮಹತ್ವ ಕೊಟ್ಟಿದ್ದ ಗಾಂಧೀಜಿ ಮಾರ್ಗದಲ್ಲಿ ನಾವೂ ನಡೆಯೋಣ’ ಎಂದರು.

‘ಗಾಂಧೀಜಿಯಿಂದ ಪ್ರಭಾವಿತರಾದ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರು, ಬ್ರಿಟಿಷ್ ವಿರೋಧಿ ಆಂದೋಲನಗಳ ನಾಯಕತ್ವ ವಹಿಸಿದ್ದರು. ಸ್ವಾತಂತ್ರ್ಯ ನಂತರದ ಭಾರತದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು’ ಎಂದರು. 

ಪ್ರಧಾನ ಕಾರ್ಯದರ್ಶಿ ವಸಂತ ನಾಡಜೋಶಿ, ಪೂರ್ವ ಕ್ಷೇತ್ರದ ಅಧ್ಯಕ್ಷ ಮಂಜುನಾಥ ಕಾಟಕರ, ಅನೂಪ ಬಿಜವಾಡ, ರಂಗಾ ಕಠಾರೆ,  ಪವಾಡಪ್ಪ ಛಲವಾದಿ, ಗುರು ಬನ್ನಿಕೊಪ್ಪ, ಚಂದ್ರು ಮುಶಣ್ಣವರ, ನೀಲಕಂಠ ತಡಸದಮಠ, ಶಿವಾನಂದ ಅಂಬಿಗೇರ, ಮಂಜು ಪಾಳೇದ, ರಾಜು, ಬಶೀರ ಗಿರಣಿ, ನರಸಯ್ಯ ಬಿಜವಾಡ, ಆನಂದ ಮದರಿ ಇದ್ದರು. 

ಶಾಸಕ ಮಹೇಶ ಟೆಂಗಿನಕಾಯಿ ಅವರ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಸಿದ್ದು ಮೊಗಲಿಶೆಟ್ಟರ್, ರವಿ ನಾಯಕ, ರಘು ಧಾರವಾಡಕರ ಇದ್ದರು. 

ಹುಬ್ಬಳ್ಳಿಯ ಕೆಎಂಸಿ–ಆರ್‌ಐ ಆಸ್ಪತ್ರೆ ಮುಂಭಾಗದ ಗಾಂಧಿ ಪುತ್ಥಳಿಗೆ ಉತ್ತರ ಕರ್ನಾಟಕ ಆಟೊರಿಕ್ಷಾ ಚಾಲಕರ ಸಂಘ ಹಾಗೂ  ಆಟೊರಿಕ್ಷಾ ಮಾಲೀಕರು–ಚಾಲಕರ ಸಂಘದಿಂದ ನಮನ ಸಲ್ಲಿಸಲಾಯಿತು
ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಭಾವಚಿತ್ರಕ್ಕೆ ಪಕ್ಷದ ಮುಖಂಡರು ನಮಿಸಿದರು
ಹುಬ್ಬಳ್ಳಿಯ ರೈಲುನಿಲ್ದಾಣದಲ್ಲಿ ಗುರುವಾರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು 
ಶಾಸಕ ಮಹೇಶ ಟೆಂಗಿನಕಾಯಿ ಅವರ ಹುಬ್ಬಳ್ಳಿಯ ಕಾರ್ಯಾಲಯದಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಿಸಲಾಯಿತು

‘ಸ್ವಚ್ಛ ಭಾರತ ನಿರ್ಮಾಣಕ್ಕೆ ಕೈಜೋಡಿಸಿ’

ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದಿಂದ ನಗರದ ರೈಲುನಿಲ್ದಾಣದಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಮತ್ತು ಸ್ವಚ್ಛತೆಯೇ ಸೇವೆ ಅಭಿಯಾನದ ಸಮಾರೋಪ ಸಮಾರಂಭ ಜರುಗಿತು. ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಬೇಲಾ ಮೀನಾ ಮಾತನಾಡಿ ‘ಮಹಾತ್ಮ ಗಾಂಧೀಜಿ ಸತ್ಯ ಮತ್ತು ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ವಿನಯ ಮತ್ತು ನಿಷ್ಠೆಯ ಪ್ರತೀಕವಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಜೈ ಜವಾನ್ ಜೈ ಕಿಸಾನ್ ಎಂಬ ಸ್ಫೂರ್ತಿದಾಯಕ ಘೋಷಣೆಯನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದರು’ ಎಂದರು.  ‘ತ್ಯಾಜ್ಯರಹಿತ ಭಾರತ ನಿರ್ಮಾಣಕ್ಕಾಗಿ ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದರೊಂದಿಗೆ ನಾಗರಿಕರಲ್ಲಿ ಪರಿಸರ ಪ್ರೇಮ ಬೆಳೆಸಬೇಕಿದೆ. ಸ್ವಚ್ಛ ಮತ್ತು ಹಸಿರು ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದರು. ರೈಲುನಿಲ್ದಾಣದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಗಾಂಧಿ ಪ್ರತಿಮೆಗೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಫಾತಿಮಾ ಪದವಿ ಕಾಜಿನ ಸ್ಕೌಟ್ಸ್ ಮತ್ತು ಗೈಡ್ಸ್ ರೈಲ್ವೆ ಹೈಸ್ಕೂಲ್ ವಿದ್ಯಾರ್ಥಿಗಳು ‘ಪ್ಲಾಸ್ಟಿಕ್ ಮುಕ್ತ ಪರಿಸರ’ ಕುರಿತು ಕಿರುನಾಟಕ ಹಾಗೂ ನೃತ್ಯ ಪ್ರಸ್ತುತಪಡಿಸಿದರು. ಚಿತ್ರಕಲೆ ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.