ADVERTISEMENT

ಗಣೇಶ ಚತುರ್ಥಿ | ವಿಶೇಷ ರೈಲು: ನೈರುತ್ಯ ರೈಲ್ವೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 4:52 IST
Last Updated 21 ಆಗಸ್ಟ್ 2025, 4:52 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ಹುಬ್ಬಳ್ಳಿ: ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚವರಿ ದಟ್ಟಣೆ ನಿರ್ವಹಿಸಲು ನೈರುತ್ಯ ರೈಲ್ವೆಯು ಎಸ್‌ಎಸ್ಎಸ್‌ ಹುಬ್ಬಳ್ಳಿ–ಮಂಗಳೂರು ಸೆಂಟ್ರಲ್‌ ನಡುವೆ ಒಂದು ಟ್ರಿಪ್‌ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.

ADVERTISEMENT

ಎಸ್‌ಎಸ್‌ಎಸ್‌ ಹುಬ್ಬಳ್ಳಿ–ಮಂಗಳೂರು ಸೆಂಟ್ರಲ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲು (07341) ಆಗಸ್ಟ್ 26ರಂದು ಸಂಜೆ 4ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 11.45ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪಲಿದೆ.

ವಿಶೇಷ ರೈಲು  (07342) ಆಗಸ್ಟ್‌ 27ರಂದು ಮಧ್ಯಾಹ್ನ 2.15ಕ್ಕೆ ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಹೊರಟು ರಾತ್ರಿ 9.45ಕ್ಕೆ ಹುಬ್ಬಳ್ಳಿ ನಿಲ್ದಾಣಕ್ಕೆ ಬರಲಿದೆ. 

ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯರಸ್ತೆ, ಕಬಕಪುತ್ತೂರು, ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.