ADVERTISEMENT

ಹುಬ್ಬಳ್ಳಿ | ಗ್ಯಾಸ್‌ ಸಿಲಿಂಡರ್‌ ಸ್ಫೋಟ: ಮತ್ತೊಬ್ಬ ಮಾಲಾಧಾರಿ ಸಾವು

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2024, 16:23 IST
Last Updated 30 ಡಿಸೆಂಬರ್ 2024, 16:23 IST
ತೇಜೇಶ್ವರ ಸಾತ್ರಿ
ತೇಜೇಶ್ವರ ಸಾತ್ರಿ   

ಹುಬ್ಬಳ್ಳಿ: ಗ್ಯಾಸ್‌ ಸಿಲಿಂಡರ್‌ ಸ್ಫೋಟದಿಂದ ತೀವ್ರ ಗಾಯಗೊಂಡು ಇಲ್ಲಿನ ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ.

‘ರಾಮನಗರದ ನಿವಾಸಿ ತೇಜೇಶ್ವರ ಸಾತ್ರಿ (26) ಮೃತರು. ತೀವ್ರ ಗಾಯಗೊಂಡಿರುವ ಪ್ರಕಾಶ ಬಾರಕೇರ(42) ಅವರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯಕ್ಕೆ ವಿನಾಯಕ (12) ಚೇತರಿಸಿಕೊಳ್ಳುತ್ತಿದ್ದಾನೆ’ ಎಂದು ಕೆಎಂಸಿಆರ್‌ಐ ನಿರ್ದೇಶಕ ಡಾ. ಎಸ್.ಎಫ್. ಕಮ್ಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT