ADVERTISEMENT

ಫೀಲ್ಡ್‌ಗೆ ಇಳಿದು ಕರ್ತವ್ಯ ನಿರ್ವಹಿಸಿ; ಪೊಲೀಸ್ ಕಮಿಷನರ್‌ಗೆ ಗೃಹಸಚಿವರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2020, 8:09 IST
Last Updated 30 ಆಗಸ್ಟ್ 2020, 8:09 IST
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ   

ಹುಬ್ಬಳ್ಳಿ: ಅವಳಿ ನಗರದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪೊಲೀಸ್ ಕಮಿಷನರ್ ಆರ್. ದಿಲೀಪ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಒಂದು ವಾರದಲ್ಲಿ ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಬೀಳಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಪ್ರಕರಣಗಳು ನಡೆದರೆ ಅದಕ್ಕೆ ನೀವೆ ನೇರ ಹೊಣೆಗಾರರು ಎಂದು ಕಮಿಷನರ್ ಅವರಿಗೆ ಎಚ್ಚರಿಕೆ ನೀಡಿರುವುದಾಗಿ ಸಚಿವರು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಇತ್ತೀಚೆಗೆ ನಗರದಲ್ಲಿ ಸಾಕಷ್ಟು ಅಪರಾಧ ಪ್ರಕರಣಗಳು ಹಾಗೂ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಎರಡ್ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಹಲ್ಲೆ, ಕೊಲೆಯಂತಹ ಗಂಭೀರ ಅಪರಾಧಗಳು ಸಹ ನಡೆಯುತ್ತಿವೆ. ಇವುಗಳ ನಿಯಂತ್ರಣಕ್ಕೆ ಕಮಿಷನರ್ ಅವರು ಕಚೇರಿಯಲ್ಲಿ ಕುಳಿತು ಕಾಗದ ಪತ್ರಗಳ ಮೂಲಕ ಸೂಚನೆ ನೀಡುವುದಲ್ಲ. ಸ್ವತಃ ಫೀಲ್ಡ್'ಗೆ ಇಳಿದು ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು ಸೂಚಿಸಿರುವುದಾಗಿ ಹೇಳಿದರು.

ADVERTISEMENT

ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಕ್ರೈಂ ಟೀಂ ರಚಿಸಲು ಸೂಚಿಸಿದ್ದೇನೆ. ಅಪರಾಧ ಚಟುವಟಿಕೆಗಳ ಸಂಪೂರ್ಣ ನಿಯಂತ್ರಣಕ್ಕೆ ಕಮಿಷನರ್, ಡಿಸಿಪಿಗೆ ಒಂದು ವಾರದ ಗಡುವು ನೀಡಿದ್ದು, ನಾನು ಸಹ ಆ ಕುರಿತು ಪರಿಶೀಲನೆ ನಡೆಸುತ್ತ ಇರುತ್ತೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.