ಬಸ್
– ಪ್ರಜಾವಾಣಿ ಚಿತ್ರ
ಹುಬ್ಬಳ್ಳಿ: ಸಾರ್ವಜನಿಕರ ಬೇಡಿಕೆ ಮೇರೆಗೆ ಭಾನುವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ಬೆಳಗಾವಿ ಜಿಲ್ಲೆಯ ಗೋಕಾಕ್ ಜಲಪಾತಕ್ಕೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ.
ಮಾರ್ಗ ಮಧ್ಯೆ ಯಲ್ಲಮ್ಮನ ಗುಡ್ಡದಲ್ಲಿ ರೇಣುಕಾ ದೇವಿ ದರ್ಶನ ಹಾಗೂ ನವಿಲುತೀರ್ಥ ಡ್ಯಾಂ ವೀಕ್ಷಣೆಗೂ ಅವಕಾಶ ಕಲ್ಪಿಸಲಾಗಿದೆ.
ವೇಗದೂತ ಬಸ್ ಹುಬ್ಬಳ್ಳಿಯ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಬೆಳಿಗ್ಗೆ 7.30ಕ್ಕೆ ಹೊರಟು, ಮಧ್ಯಾಹ್ನ 2ಕ್ಕೆ ಗೋಕಾಕ್ ಫಾಲ್ಸ್ ತಲುತ್ತದೆ. ಅಲ್ಲಿಂದ ಸಂಜೆ 5ಕ್ಕೆ ಹೊರಡುವ ಬಸ್, ರಾತ್ರಿ 9 ಕ್ಕೆ ಹುಬ್ಬಳ್ಳಿಗೆ ಬರಲಿದೆ. ಒಬ್ಬರಿಗೆ ₹450 ಪ್ರಯಾಣದರ ನಿಗದಿಪಡಿಸಲಾಗಿದೆ. ಈ ವಿಶೇಷ ಬಸ್‌ಗೆ ಶಕ್ತಿ ಯೋಜನೆ ಅನ್ವಯವಾಗುವುದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.