
ಪ್ರಜಾವಾಣಿ ವಾರ್ತೆ
ಧಾರವಾಡ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರನ್ನು ಫೋಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.
ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಎನ್‌ಟಿಟಿಎಫ್ ಬಳಿಯ ಸನ್ಮತಿ ಮಾರ್ಗದಲ್ಲಿರುವ ಎಸ್‌ಯುಸಿಐ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಆರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಎಸ್‌ಯುಸಿಐ ಕಚೇರಿ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.
ನಗರದ ವಿವಿಧೆಡೆ ಪೊಲೀಸ್ ಪಹರೆ ಹಾಕಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.