ಕಲಘಟಗಿ: ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಹುಲಗಿನಗಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಸುತ್ತಲಿನ ಜಾಗೆ ಅತಿಕ್ರಮಣಕ್ಕೊಳಗಾಗಿದ್ದು, ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ಎಸ್‌ಡಿಎಂಸಿ ಸದಸ್ಯರು ತಹಶೀಲ್ದಾರ್ ಯಲ್ಲಪ್ಪ ಗೋಣೆನ್ನವರಿಗೆ ಬುಧವಾರ ಮನವಿ ಸಲ್ಲಿಸಿದರು.
ಶಾಲೆ ಕಟ್ಟಡ 95 ವರ್ಷಗಳಿಂದ ಗ್ರಾಮಠಾಣಾ ವ್ಯಾಪ್ತಿಯಲ್ಲಿದ್ದು ಅಕ್ಕ ಪಕ್ಕದವರು ಅತಿಕ್ರಮಿಸಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ತಕರಾರು ಮಾಡಿ ತೊಂದರೆ ನೀಡುತ್ತಿದ್ದಾರೆ ಎಂದು ಮನವಿಯಲ್ಲಿ ದೂರಿದ್ದಾರೆ.
ಶಾಲೆ ಜಾವವನ್ನು ರಕ್ಷಣೆ ಮಾಡಿಕೊಳ್ಳಲು ಗ್ರಾಮಸ್ಥರು 20 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದು, ಈ ಕುರಿತು ಜಿಲ್ಲಾಧಿಕಾರಿ ಹಾಗೂ ಸಚಿವರಿಗೆ ಮನವಿ ಸಲ್ಲಿಸಿದರೂ ಒತ್ತುವರಿ ಮಾತ್ರ ನಿಂತಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಅತಿಕ್ರಮಣ ಜಾಗೆ ತೆರವುಗೊಳಿಸಿ ಶಾಲೆ ನೂತನ ಕಟ್ಟಡಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ನಂತರ ಗ್ರಾಮಸ್ಥರು ಪೊಲೀಸ್ ಠಾಣೆ ಹಾಗೂ ಪಟ್ಟಣ ಪಂಚಾಯ್ತಿಗೆ ತೆರಳಿ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.