ADVERTISEMENT

ಗ್ರಾಮದೇವಿ ಜಾತ್ರಾ ಮಹೋತ್ಸವ ಸಂಪನ್ನ

​ಪ್ರಜಾವಾಣಿ ವಾರ್ತೆ
Published 17 ಮೇ 2022, 15:40 IST
Last Updated 17 ಮೇ 2022, 15:40 IST

ಕಲಘಟಗಿ: ತಾಲ್ಲೂಕಿನ ದ್ಯಾವನಕೊಂಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಗ್ರಾಮದೇವಿ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮ ಮಂಗಳವಾರ ಸಂಪನ್ನಗೊಂಡಿತು.

ಧರ್ಮಸಭೆಯ ಸಾನ್ನಿಧ್ಯ ವಹಿಸಿದ್ದ ಕಲಘಟಗಿಯ ಹನ್ನೆರಡು ಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ ಕಳಸಾರೋಹಣ ನೆರವೇರಿಸಿದರು. ಸೋಮನಕೊಪ್ಪದ ಸಿದ್ಧಾರೂಢ ಮಠದ ನಿರ್ಗುಣಾನಂದ ಸ್ವಾಮೀಜಿ, ಕೆ.ಕೆ. ಹಳ್ಳಿಯ ನಿತ್ಯಾನಂದ ಆಶ್ರಮದ ಸುಬ್ರಹ್ಮಣ್ಯ ಸ್ವಾಮೀಜಿ, ಮಣಕವಾಡದ ದೇವಮಂದಿರ ಮಹಾಮಠದ ಸಿದ್ದರಾಮ ದೇವರು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಸಿ. ಎಂ ನಿಂಬಣ್ಣವರ, ಮಾಜಿ ಸಚಿವ ಸಂತೋಷ ಲಾಡ್, ಜಿನ್ನೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ದೊಡ್ಡಗಡೆಪ್ಪನವರ ಪಾಲ್ಗೊಂಡಿದ್ದರು.

ಕಲಾವಿದ ಸಂದೇಶ್ ಸಂಗೀತ, ಮಲ್ಲಯ್ಯ ಸ್ವಾಮಿ ತೋಟಗಂಟಿ ಹಾಗೂ ಡಾ.ರಾಮು ಮೂಲಗಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿದವು. ಮಂಗಳವಾರ ಗ್ರಾಮದೇವಿಗೆ ಭಕ್ತರು ಉಡಿತುಂಬಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.