ADVERTISEMENT

‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಡಿ. 25ಕ್ಕೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2021, 9:10 IST
Last Updated 23 ಡಿಸೆಂಬರ್ 2021, 9:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ: ‘ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ರಾಜ್ಯಮಟ್ಟದ ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ, ಗಣ್ಯರಿಗೆ ಅಭಿನಂದನಾ ಸಮಾರಂಭ ಹಾಗೂ ಸಂಘದ ಎರಡನೇ ಮಹಾಸಭೆಯನ್ನು ಡಿ. 25ರಂದು ಹುಬ್ಬಳ್ಳಿಯ ಸಿದ್ಧಾರೂಢ ಮಠದ ಕಲ್ಯಾಣಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಶೋಕ ಸಜ್ಜನವರ ಹೇಳಿದರು.

‘ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರು, 82 ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರು ಮುಂಡರಗಿ ಮತ್ತು ಟಿ. ನರಸೀಪುರ ತಾಲ್ಲೂಕುಗಳ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಡಾ. ಮಹೇಶ ಜೋಶಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮುಖ್ಯ ಅತಿಥಿಗಳಾಗಿ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ, ಉಪ ನಿರ್ದೇಶಕ ಮೋಹನಕುಮಾರ ಹಂಚಾಟೆ, ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಗದಗ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್, ಅಂಗವಿಕಲರ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬೀರಪ್ಪ ಅಂಡಗಿ, ಜಾನಪದ ವಿದ್ವಾಂಸ ಡಾ. ರಾಮು ಮೂಲಗಿ, ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ಅಧ್ಯಕ್ಷ ಗುರು ತಿಗಡಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವೈ.‌ ಸೊರಟಿ ಹಾಗೂ ರಾಜ್ಯ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪವಾಡೆಪ್ಪ ಕಾಂಬಳೆ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಸಂಘದ ಎರಡನೇ ಮಹಾಸಭೆ ನಡೆಯಲಿದೆ. ರಾಜ್ಯ ಘಟಕದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದರು.

ADVERTISEMENT

ಸಂಘದ ಗೌರವಾಧ್ಯಕ್ಷ ಎಲ್.ಐ. ಲಕ್ಕಮ್ಮನವರ, ಹಿರಿಯ ಉಪಾಧ್ಯಕ್ಷ ಡಿ.ಟಿ. ಬಂಡಿವಡ್ಡರ, ಸಹ ಕಾರ್ಯದರ್ಶಿ ರವಿ ಬಂಗೆನ್ನವರ, ಧಾರವಾಡ ಜಿಲ್ಲಾಧ್ಯಕ್ಷ ಅಕ್ಬರಅಲಿ ಸೊಲ್ಲಾಪುರ, ಉಪಾಧ್ಯಕ್ಷ ಎಂ.ಎಸ್. ಅಕ್ಕಿ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೀವ್ ಸಿಂಗ್ ಹಲವಾಯಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.