ADVERTISEMENT

ಗೃಹಲಕ್ಷ್ಮಿ ಯೋಜನೆಯ ಹೊಸ ನೋಂದಣಿ ಪ್ರಕ್ರಿಯೆ ಮತ್ತೆ ಆರಂಭ: ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2023, 16:01 IST
Last Updated 5 ಸೆಪ್ಟೆಂಬರ್ 2023, 16:01 IST
ಲಕ್ಷ್ಮಿ ಹೆಬ್ಬಾಳಕರ
ಲಕ್ಷ್ಮಿ ಹೆಬ್ಬಾಳಕರ   

ಬೆಳಗಾವಿ: ‘ನೋಂದಾಯಿತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ₹2 ಸಾವಿರ ಜಮೆ ಆಗುತ್ತಿರುವುದನ್ನು ಖಚಿತ ಪಡಿಸಿಕೊಳ್ಳಲು ಗೃಹಲಕ್ಷ್ಮಿ ಯೋಜನೆಯ ಹೊಸ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಎಲ್ಲ ಫಲಾನುಭವಿಗಳಿಗೆ ಹಣ ತಲುಪಿದ ಬಳಿಕ ಮತ್ತೆ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

‘ಫಲಾನುಭವಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿದ್ದರಿಂದ 7ರಿಂದ 8 ಲಕ್ಷ ಫಲಾನುಭವಿಗಳಿಗೆ ಹಣ ಜಮೆಗೊಳಿಸಲು ತೊಡಕಾಗಿದೆ. ಶೀಘ್ರ ಅದನ್ನು ಸರಿಪಡಿಸುತ್ತೇವೆ. ಖಜಾನೆಗೆ ಹಣ ಬಿಡುಗಡೆ ಮಾಡಲಾಗಿದ್ದು, 1 ಕೋಟಿ ಫಲಾನುಭವಿಗಳಿಗೆ 2ರಿಂದ 3 ದಿನಗಳಲ್ಲಿ ಹಣ ಜಮೆಯಾಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT