ಹುಬ್ಬಳ್ಳಿ: ಕೇಂದ್ರ ಸರ್ಕಾರ ಕೆಲವು ವಸ್ತುಗಳ ಮೇಲಿನ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಕಡಿಮೆ ಮಾಡಿರುವುದನ್ನು ಸ್ವಾಗತಿಸಿ, ಬಿಜೆಪಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ನಗರದ ಸರ್ವೋದಯ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವ ವಹಿಸಿದ್ದರು. ಜಿಎಸ್‌ಟಿ ಸರಳಿಕರಣ ಮಾಡಿರುವ ಕುರಿತು ಫಲಕಗಳನ್ನು ಪ್ರದರ್ಶಿಸಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರ ಘೋಷಣೆ ಕೂಗಿದರು.
‘ಕೇಂದ್ರ ಸರ್ಕಾರ ಜಿಎಸ್‌ಟಿ ಸರಳೀಕರಣ ಮಾಡುವ ಮೂಲಕ ವಿಜಯದಶಮಿ ಹಬ್ಬಕ್ಕೆ ವಿಶೇಷ ಕೊಡುಗೆ ನೀಡಿದೆ. ಕ್ಯಾನ್ಸರ್ ರೋಗಿಗಳಿಗೆ ನೀಡುವ ಔಷಧ ಸೇರಿದಂತೆ 33 ಔಷಧಗಳ ಮೇಲಿನ ಜಿಎಸ್‌ಟಿ ಸಹ ಕಡಿಮೆ ಮಾಡಲಾಗಿದೆ’ ಎಂದು ಶಾಸಕ ಟೆಂಗಿನಕಾಯಿ ಹೇಳಿದರು.
ಹು–ಧಾ ಮಹಾನಗರ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಭೀರಪ್ಪ ಖಂಡೇಕರ, ಉಮಾ ಮುಕುಂದ ಹಾಗೂ ಮುಖಂಡರಾದ ದತ್ತಮೂರ್ತಿ ಕುಲಕರ್ಣಿ, ಈಶ್ವರಗೌಡ ಪಾಟೀಲ, ರವಿ ನಾಯಕ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.