ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಇಲ್ಲಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಜಾವಾ ಫುಲ್‍ಸ್ಟ್ಯಾಕ್ ವೆಬ್ ಡೆವಲಪ್‍ಮೆಂಟ್, ಸ್ಯಾಪ್, ಟ್ಯಾಲಿ, ಡಿಜಿಟಲ್ ಮಾರ್ಕೆಟಿಂಗ್, ಸಿಎನ್‍ಸಿ, 3ಡಿ ಪ್ರಿಂಟಿಂಗ್ ಮತ್ತು ಕ್ಯಾಡ್-ಕ್ಯಾಮ್ ಕೋರ್ಸ್‍ಗಳನ್ನು ಪ್ರಾರಂಭಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೊಮಾ ಮತ್ತು ಬಿ.ಇ. ಓದುತ್ತಿರುವ, ಪೂರ್ಣಗೊಳಿಸಿರುವ ಅಭ್ಯರ್ಥಿಗಳು ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ತರಬೇತಿ ಅವಧಿ ಎರಡು ತಿಂಗಳುಗಳಾಗಿದ್ದು, ಸಂಜೆ ಅವಧಿಯ ಬ್ಯಾಚ್‍ಗಳು ಸಹ ಲಭ್ಯವಿರುತ್ತವೆ.
ಕೈಗಾರಿಕೆಗಳ ಅವಶ್ಯಕತೆಗಳಿಗೆ ಅನುಗುಣವಾದ ಪಠ್ಯಕ್ರಮ ರೂಪಿಸಲಾಗಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಎಂಜಿನಿಯರ್‌ಗಳ ಮೂಲಕ ತರಬೇತಿ ನೀಡಲಾಗುತ್ತದೆ. ಏಪ್ರಿಲ್ 25ರಿಂದ ತರಬೇತಿ ಪ್ರಾರಂಭವಾಗುತ್ತದೆ.
ತರಬೇತಿ ಪೂರ್ಣಗೊಳಿಸುವ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನದ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಏಪ್ರಿಲ್ 24ರ ಒಳಗೆ ಜಿಟಿಟಿಸಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಜಿಟಿಟಿಸಿ, ಇಂಡಸ್ಟ್ರಿಯಲ್ ಎಸ್ಟೇಟ್, ಗೋಕುಲ ರಸ್ತೆ, ಹುಬ್ಬಳ್ಳಿ. ದೂರವಾಣಿ ಸಂಖ್ಯೆ: 0836-2333159. ಮೊ: 81838 60552.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.