
ಧಾರವಾಡ: ‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಪ್ರಯತ್ನಿಸಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರವಿಂದಗೌಡ ಏಗನಗೌಡರ ಹೇಳಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದರು.
‘ಕೆಲ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ಅಂತಹ ಫಲಾನುಭವಿಗಳ ಅರ್ಜಿಗಳನ್ನು ನಿಯಮಾನುಸಾರ ಪರಿಗಣಿಸಿ, ಲಾಭ ದೊರೆಯುವಂತೆ ಮಾಡಬೇಕು’ ಎಂದರು.
‘ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಈಗಾಗಲೇ ಶಿವಳ್ಳಿ ಹಾಗೂ ಮಾರಡಗಿ ಗ್ರಾಮ ಪಂಚಾಯಿತಿಗಳಲ್ಲಿ ಸಭೆ ನಡೆಸಿ ಫಲಾನುಭವಿಗಳ ಕುಂದು ಕೊರತೆ ಆಲಿಸಿ, ಪರಿಹಾರ ನೀಡಲಾಗಿದೆ’ ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಗ್ಯಾರಂಟಿ ಯೋಜನೆಯ ಸಮಿತಿ ಸದಸ್ಯರಾದ ಚಂದ್ರಶೇಖರ ಕದಂ, ಪರಮೇಶ್ವರ ಕರಿಕಟ್ಟಿ, ಮಂಜುನಾಥ ಉಡಿಕೇರಿ, ಮಿಲಿಂದ ಇಚಂಗಿ, ರಾಜೇಶ ಚವಾಣ, ಜಾಫರ ಕಳ್ಳಿಮನಿ, ಕಲಾವತಿ ಭೀಮಕ್ಕನವರ, ಮೈಲಾರಗೌಡ ಪಾಟೀಲ, ಕಾರ್ತಿಕ ಗೋಕಾಕ, ಪರಮೇಶ್ವರ ಕಾಳೇ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.