ADVERTISEMENT

ಗುದ್ಲೆಪ್ಪ ಹಳ್ಳಿಕೇರಿ ಜನ್ಮ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 15:43 IST
Last Updated 6 ಜೂನ್ 2020, 15:43 IST
ಹುಬ್ಬಳ್ಳಿಯಲ್ಲಿ ಶನಿವಾರ ಹಳ್ಳಿಕೇರಿ ಗುದ್ಲೆಪ್ಪ ಅವರ 115ನೇ ಜನ್ಮ ದಿನ ಆಚರಿಸಲಾಯಿತು
ಹುಬ್ಬಳ್ಳಿಯಲ್ಲಿ ಶನಿವಾರ ಹಳ್ಳಿಕೇರಿ ಗುದ್ಲೆಪ್ಪ ಅವರ 115ನೇ ಜನ್ಮ ದಿನ ಆಚರಿಸಲಾಯಿತು   

ಹುಬ್ಬಳ್ಳಿ: ಕರ್ನಾಟಕದ ಉಕ್ಕಿನ ಮನುಷ್ಯ ಎಂದೇ ಹೆಸರಾದ ಹಳ್ಳಿಕೇರಿ ಗುದ್ಲೆಪ್ಪ ಅವರ 115ನೇ ಜನ್ಮ ದಿನವನ್ನು ಶನಿವಾರ ಆಚರಿಸಲಾಯಿತು.

ಗುದ್ಲೆಪ್ಪ ಹಳ್ಳಿಕೇರಿ ಜನ್ಮಶತಮಾನೋತ್ಸವ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಾವೀರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್.ಕೆ ಆದಪ್ಪನವರ ಮಾತನಾಡಿ ‘ಹಳ್ಳಿಕೇರಿಯವರು ಉತ್ತರ ಕರ್ನಾಟಕದಿಂದ ಮಹಾತ್ಮ ಗಾಂಧೀಜಿ ಅವರ ಜೊತೆ ಸ್ವಾತಂತ್ರ್ಯ ಹೋರಾಟಕ್ಕೆ ಕೈ ಜೋಡಿಸಿ ರಾಜ್ಯದ ಉಕ್ಕಿನ ಮನುಷ್ಯ ಎಂದು ಹೆಸರಾಗಿದ್ದರು. ಸ್ವಾತಂತ್ರ್ಯ ಚಳವಳಿಯಲ್ಲಿ ಮೈಲಾರ ಮಹಾದೇವಪ್ಪ ಅವರ ಜೊತೆ ಬ್ರಿಟಿಷರ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದ್ದರು’ ಎಂದು ನೆನಪಿಸಿಕೊಂಡರು.

ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರು ಗುದ್ಲೆಪ್ಪ ಹಳ್ಳಿಕೇರಿ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಗುದ್ಲೆಪ್ಪನವರ ಪುತ್ರಿ ರಾಜೇಶ್ವರಿ ಬಿದರಡ್ಡಿ, ಸೊಸೆ ಅನ್ನಪೂರ್ಣ ಹಳ್ಳಿಕೇರಿ ಹಾಗೂ ಮೊಮ್ಮಗಳು ಅರ್ಚನಾ ಹಳ್ಳಿಕೇರಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.