ADVERTISEMENT

ಕಾನೂನು ವಿ.ವಿ; ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರ: ಎಚ್‌.ಕೆ.ಪಾಟೀಲ

​ಪ್ರಜಾವಾಣಿ ವಾರ್ತೆ
Published 19 ಜನವರಿ 2024, 20:43 IST
Last Updated 19 ಜನವರಿ 2024, 20:43 IST
ಎಚ್‌.ಕೆ.ಪಾಟೀಲ
ಎಚ್‌.ಕೆ.ಪಾಟೀಲ   

ಧಾರವಾಡ: ‘ರಾಜ್ಯದ ಕಾನೂನು ವಿಶ್ವವಿದ್ಯಾಲಯಕ್ಕೆ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭಿಸಲಾಗುವುದು’ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

‘ಕಾನೂನು ವಿಶ್ವವಿದ್ಯಾಲಯದಲ್ಲಿ ಕೋರ್ಸ್‌ ಸೀಟುಗಳ ಸಂಖ್ಯೆ 180 ರಿಂದ 300ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಮೂಲಸೌಲಭ್ಯಕ್ಕಾಗಿ ₹ 70 ಕೋಟಿ ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಆಡಳಿತ ಭವನ, ಗ್ರಂಥಾಲಯ, ಕ್ಯಾಂಟೀನ್‌, ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣವಾಗಲಿವೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ಕಾಂಗ್ರೆಸ್‌ ಸೇರುವವರು ನೀತಿಗೆಟ್ಟವರು’ ಎಂದು ಜೆಡಿಎಸ್‌ನ ಶಿವಲಿಂಗೇಗೌಡರು ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ರಾಜಕೀಯ ಅಜ್ಞಾನ ಇರುವವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ರಾಜ್ಯದ ಕಾಂಗ್ರೆಸ್‌ ಸರ್ಕಾರವು ಏಳು ತಿಂಗಳಿನಿಂದ ಒಂದು ಕೋಟಿಗೂ ಹೆಚ್ಚು ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ, ಸರ್ಕಾರದ ಸವಲತ್ತುಗಳು ಶೇ 95 ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಿದೆ. ಇದನ್ನು ಶಿವಲಿಂಗೇಗೌಡ ಅರ್ಥ ಮಾಡಿಕೊಳ್ಳಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.