ADVERTISEMENT

ಉತ್ತರ ಕರ್ನಾಟಕದಲ್ಲಿ ಹಜ್‌ ಭವನ: ಚರ್ಚೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2022, 3:43 IST
Last Updated 21 ಮಾರ್ಚ್ 2022, 3:43 IST
ಹುಬ್ಬಳ್ಳಿಯಲ್ಲಿ ಭಾನುವಾರ ಅಂಜುಮನ್‌ ಎ ಇಸ್ಲಾಂ ಸಂಸ್ಥೆಯ ಪದಾಧಿಕಾರಿಗಳು ಶಾಸಕರಾದ ಪ್ರಸಾದ ಅಬ್ಬಯ್ಯ, ಶ್ರೀನಿವಾಸ ಮಾನೆ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್‌ ಅವರನ್ನು ಸನ್ಮಾನಿಸಿದರು
ಹುಬ್ಬಳ್ಳಿಯಲ್ಲಿ ಭಾನುವಾರ ಅಂಜುಮನ್‌ ಎ ಇಸ್ಲಾಂ ಸಂಸ್ಥೆಯ ಪದಾಧಿಕಾರಿಗಳು ಶಾಸಕರಾದ ಪ್ರಸಾದ ಅಬ್ಬಯ್ಯ, ಶ್ರೀನಿವಾಸ ಮಾನೆ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್‌ ಅವರನ್ನು ಸನ್ಮಾನಿಸಿದರು   

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಹಜ್‌ ಭವನನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ, ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಅಂಜುಮನ್‌ ಎ ಇಸ್ಲಾಂ ಸಂಸ್ಥೆಯ ವತಿಯಿಂದ ಸಭೆ ನಡೆಸಲಾಯಿತು.

‘ಉತ್ತರ ಕರ್ನಾಟಕದಲ್ಲಿ ಹಜ್‌ ಭವನ ನಿರ್ಮಿಸುವುದಕ್ಕೆ ಸಂಸ್ಥೆಯಿಂದ ಸಮಿತಿ ರಚನೆ ಮಾಡಲಾಗಿದ್ದು, ಭಾನುವಾರ ಮೊದಲ ಸಭೆ ನಡೆಸಲಾಯಿತು. ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗದ ಲಭ್ಯತೆ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಜಗದೀಶ ಶೆಟ್ಟರ್‌, ಅರವಿಂದ ಬೆಲ್ಲದ ಸೇರಿದಂತೆ ವಿವಿಧ ನಾಯಕರೊಂದಿಗೆ ಚರ್ಚಿಸಲಾಗುವುದು. ಜಾಗ ನೀಡುವಂತೆ ಮನವಿ ಮಾಡಲಾಗುವುದು’ ಎಂದು ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ ‘ಪ್ರಜಾವಾಣಿ’ಗೆ ತಿಳಿಸಿದರು.

ಅಂಜುಮನ್‌ ಸಂಸ್ಥೆಯ ಅಧ್ಯಕ್ಷ ಯುಸೂಫ ಸವಣೂರ, ಉಪಾಧ್ಯಕ್ಷ ಅಲ್ತಾಫ ಕಿತ್ತೂರ, ಮುಖಂಡರಾದ ಎಂ.ಎ. ಪಠಾಣ, ಬಶೀರ್ ಹಳ್ಳೂರ, ಅಬ್ದುಲ್ಲಾ ಮುನಾಫ ದೇವಗೇರಿ, ದಾದಾಯತ್ ಖೈರಾತಿ, ಅಬ್ದುಲ್ ಅಹ್ಮದ್‌ ಖೈರಾತಿ, ಅನೀಲಕುಮಾರ ಪಾಟೀಲ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.