
ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆ
ಧಾರವಾಡ: ಎಪ್‌ಸ್ಟೈನ್ ಪ್ರಕರಣದಲ್ಲಿ ಕೇಂದ್ರ ಸಚಿವ ಹರ್ದೀಪ್ ಪುರಿ ಅವರ ಹೆಸರು ಕೇಳಿಬಂದಿದ್ದು, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿಕಾಂಗ್ರೆಸ್ ಮಹಿಳಾ ಘಟಕದವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
‘ಸಾರ್ವಜನಿಕ ಸ್ಥಾನಗಳಲ್ಲಿರುವವವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕು. ಘನತೆಯಿಂದ ನಡೆದುಕೊಳ್ಳಬೇಕು, ಪಾರದರ್ಶಕವಾಗಿರಬೇಕು’ ಎಂದು ಪ್ರತಿಭಟನಾಕಾರರು ಹೇಳಿದರು.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೌರಮ್ಮ ಬಳೋಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.