
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ‘ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಜ.15ರಂದು ‘ಹರ ಜಾತ್ರಾ ಉತ್ಸವ’ ನಡೆಯಲಿದೆ. ಈ ಸಾಲಿನಿಂದ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದ ಒಬ್ಬ ಸಾಧಕರಿಗೆ ‘ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ’ ಪ್ರದಾನ ಮಾಡಲಾಗುವುದು’ ಎಂದು ವಚನಾನಂದ ಸ್ವಾಮೀಜಿ ಇಲ್ಲಿ ಹೇಳಿದರು.
‘ಪ್ರಶಸ್ತಿಗೆ ಪುರುಷರನ್ನು ಪರಿಗಣಿಸಲಾಗುವುದು. ಪ್ರಶಸ್ತಿ ಆಯ್ಕೆ ಸಮಿತಿ ರಚಿಸಿದ್ದು, ಶೀಘ್ರವೇ ಹೆಸರು ಪ್ರಕಟಿಸಲಾಗುವುದು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘2020ರಿಂದ ಪ್ರತಿ ವರ್ಷ ಜಾತ್ರಾ ಮಹೋತ್ಸವ ನಡೆಸುತ್ತಿದ್ದು, ಆರೋಗ್ಯ ಮತ್ತು ಉದ್ಯೋಗ ಮೇಳವೂ ನಡೆಯುತ್ತದೆ. ಈ ವರ್ಷ ಕಿತ್ತೂರು ಚನ್ನಮ್ಮ ವಿಜಯೋತ್ಸವದ ಪ್ರಮುಖವಾದುದಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.