ಪ್ರಾತಿನಿಧಿಕ ಚಿತ್ರ
ಹುಬ್ಬಳ್ಳಿ: ಬಳ್ಳಾರಿಯ ಪಾರ್ವತಿ ನಗರದಲ್ಲಿನ ಗುಣಶೀಲ ಫರ್ಟಿಲಿಟಿ ಸೆಂಟರ್‌ನಲ್ಲಿ ಆಗಸ್ಟ್ 31ರಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 2.30ರವರೆಗೆ ಸಂತಾನಹೀನತೆ (ಬಂಜೆತನ) ಸಮಸ್ಯೆ ಎದುರಿಸುತ್ತಿರುವ ದಂಪತಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಪದೇ ಪದೇ ಗರ್ಭಪಾತ, ಐವಿಎಫ್ ಚಿಕಿತ್ಸೆ ವೈಫಲ್ಯ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಬಹುದು.
ಬಂಜೆತನ ನಿವಾರಣೆ ತಜ್ಞೆ ಡಾ. ದೇವಿಕಾ ಗುಣಶೀಲ ಅವರ ನೇತೃತ್ವದಲ್ಲಿ ವೈದ್ಯರ ತಂಡವು ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ಸ್ಕ್ಯಾನಿಂಗ್ ಮಾಡುವುದರ ಜೊತೆಗೆ ಅಗತ್ಯ ಸಲಹೆ, ಮಾರ್ಗದರ್ಶನ ನೀಡುವರು ಎಂದು ಪ್ರಕಟಣೆ ತಿಳಿಸಿದೆ. ಆಸಕ್ತ ದಂಪತಿಗಳು ಹೆಸರು ನೋಂದಾಯಿಸಲು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 08392-469595 ಅಥವಾ 9663769595.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.